ಸಾಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾಗಿ ಡಾ.ನಸೀಮ್ ಅಹ್ಮದ್ ಅವರನ್ನು ಸರ್ವಾನುಮತದಿಂದ ಚುನಾಯಿಸಲಾಯಿತು.
ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಸಾ ಅದ್ ಬೆಳಗಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶಾಫಿ ಭಾಗ್‌ನಲ್ಲಿ ನಡೆದ ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಪದಾಧಿಕಾರಿಗಳ ರಾಜ್ಯ ಮಟ್ಟದ ಸಭೆಯಲ್ಲಿ ಅವರನ್ನು ಚುನಾಯಿಸಲಾಯಿತು.
ಡಾ.ನಸೀಮ್ ಅಹ್ಮದ್ ಅವರು ಖ್ಯಾತ ಯುನಾನಿ ವೈದ್ಯರಾಗಿದ್ದು, ಅವರು ಈ ಮುಂಚೆ ಹಲವು ಸಂಘಟನೆಗಳ ಜವಾಬ್ದಾರಿಯನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರ ಅನುಮತಿಸಿದರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಪುನರುಚ್ಚಾರ
ಎಸ್‌ಐಒನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು, ಕರ್ನಾಟಕ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷರು, ಇಕ್ರಾ ಸ್ಕೂಲ್ ಮ್ಯಾನೇಜಿಂಗ್ ಡೈರೆಕ್ಟರ್, ಐಡಿಯಲ್ ಸ್ಪೋರ್ಟ್ಸ್ ಟ್ರಸ್ಟ್ ಅಧ್ಯಕ್ಷರು, ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಸಂಘಟನೆಯ ಸಕ್ರಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.