ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

Date:

Advertisements

ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ 68 ವರ್ಷದ ಓಂ ಪ್ರಕಾಶ್ ಅವರ ಕೊಲೆಯಾಗಿದೆ.

1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& ಐಜಿಪಿಯಾಗಿದ್ದರು. ಅವರ ಪತ್ನಿಯೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಓಂ ಪ್ರಕಾಶ್ ಅವರ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಯುಪಿ ಮಾಜಿ ಪೊಲೀಸ್ ಮಹಾನಿರ್ದೇಶಕ ಬಿಜೆಪಿಗೆ ಸೇರ್ಪಡೆ

Advertisements

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್​ಜಾನ್ಸ್‌​ ಆಸ್ಪತ್ರೆಗೆ ರವಾನಿಸಲಾಗಿದೆ.

ಬಿಹಾರದ ಚಂಪಾರಣ್ ಜಿಲ್ಲೆಯರಾದ ಓಂ ಪ್ರಕಾಶ್ ಅವರು ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್‌ಪಿಯಾಗಿದ್ದರು. ಬಳಿಕ ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್‌ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್‌ಪಿಯಾಗಿದ್ದರು.

ಓಂ ಪ್ರಕಾಶ್ ಅವರು 2015ರ ಮಾರ್ಚ್ 1ರಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮುನ್ನ ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

Download Eedina App Android / iOS

X