ಎಲ್ಲ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ”ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ” ಎಂದು ಹೇಳಿದ್ದಾರೆ.
“ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ” ಎಂದಿದ್ದಾರೆ.
ಸರ್ ನಮಸ್ಕಾರ ನನ್ನ ಹೆಸರು ಮಂಜುನಾಥ ಗ್ರಾಮ ಪಂಚಾಯಿತಿ ಪೌರಕಾರ್ಮಿಕ ಸರ್ ಎಲ್ಲಾ ಪೌರಕಾರ್ಮಿಕರಿಗೂ ಕಾಯಂ ಮಾಡುತ್ತೇವೆ ಎಂದು ಹೇಳಿದ್ದಾರೆ ನಮ್ಮ ಸಿದ್ದರಾಮಯ್ಯ ಸಾಹೇಬರು ಗ್ರಾಮ ಪಂಚಾಯಿತಿ ಪೌರಕಾರ್ಮಿಕರಿಗೂ ಕಾಯಂ ಆಗುತ್ತಾ ಯಾಕೆಂದರೆ ಪಟ್ಟಣ ಪಂಚಾಯತಿ ಪುರಸಭೆ ನಗರಸಭೆ ಮಹಾನಗರ ಪಾಲಿಕೆ ಬರಿ ಇವರಿಗೆ ಕಾಯಂ ಮಾಡಿದರೆ ಗ್ರಾಮ ಪಂಚಾಯಿತಿ ಪೌರಕಾರ್ಮಿಕರನ್ನು ಯಾರು ನೋಡುತ್ತಾರೆ ಗ್ರಾಮ ಪಂಚಾಯಿತಿ ಪೌರಕಾರ್ಮಿಕರು ಗ್ರಾಮವನ್ನು ಸ್ವಚ್ಛ ಮಾಡುವುದು ತಪ್ಪ ಸರಿನಾ ಅಂದರೆ ಗ್ರಾಮ ಪಂಚಾಯಿತಿ ಪೌರಕಾರ್ಮಿಕರಿಗೆ ದಯವಿಟ್ಟು ಕಾಯಂ ಮಾಡಿ ವಾಸ ಮಾಡೋಕೆ ಅವರಿಗೆ ಜಾಗವನ್ನು ಕೊಡಬೇಕಾಗಿ ವಿನಂತಿ