ಬಸವಣ್ಣನನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದು ಕೌಠಾ(ಬಿ) ಬಸವಯೋಗಾಶ್ರಮದ ಡಾ.ಸಿದ್ದರಾಮ ಶರಣರು ಬೆಲ್ದಾಳ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ವಚನ ಜಾತ್ರೆ-2025 ಮತ್ತು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ನಿಮಿತ್ತ ಭಾನುವಾರ ಆಯೋಜಿಸಿದ್ದ ʼಅನುಭವ ಮಂಟಪನು ಮಾಡಿ ಅನುಭಾವ ಮೂರ್ತಿಯಾದ ಬಸವಯ್ಯನುʼ ಗೋಷ್ಠಿಯಲ್ಲಿ ಅವರು ಅನುಭಾವ ನೀಡಿದರು.
ʼಎಲ್ಲ ವರ್ಗದ ಶರಣರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಅನುಭವ ಮಂಟಪದಲ್ಲಿ ಚರ್ಚಿಸುತ್ತಿದ್ದರು. ಅಂತಹ ಅನುಭವ ಮಂಟಪ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಅದನ್ನು ಕೆಲವರು ಕೆದಕುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಬಸವಾದಿ ಶರಣರು ತಮ್ಮ ಅನೇಕ ವಚನಗಳಲ್ಲಿ ಅನುಭವ ಮಂಟಪದ ಬಗ್ಗೆ ಉಲ್ಲೇಖವಿದೆʼ ಎಂದು ತಿಳಿಸಿದರು.
ಕಮಲನಗರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್ ಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿದರು. ಇದೇವೇಳೆ ನಾಗರಾಜ ವೈಜಿನಾಥ ಸಿರ್ಸೆ ಮತ್ತು ಸರಸ್ವತಿ ವೈಜಿನಾಥ ಸಿರ್ಸೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ನಾಡೊಜ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಅಧ್ಯಕ್ಷತೆ ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಶಶಿಕಲಾ ಅಶೋಕ ವಾಲೆ ಬಸವ ಗುರುವಿನ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಜಗನ್ನಾಥ ಹೆಬ್ಬಾಳೆ, ಕಲಬುರಗಿಯ ಎಸ್.ದಿವಾಕರ್ ಮಾತನಾಡಿದರು. ಪ್ರಗತಿ ಸಂಗಯ್ಯ ಸ್ವಾಮಿ ವಚನ ಸಂಗೀತ ನಡೆಸಿ ಕೊಟ್ಟರು. ಆರತಿ ಪಾತ್ರೆ ನಿರೂಪಿಸಿದರು. ಪಾರ್ವತಿ ಧುಮನಸೂರೆ ವಂದಿಸಿದರು.