ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಕೆಲವು ದೆಹಲಿ ವಿಶ್ವವಿದ್ಯಾಲಯ ಕಾಲೇಜುಗಳು ವಿದ್ಯಾರ್ಥಿಗಳಿಗೆ ಕಪ್ಪು ಉಡುಪು ಧರಿಸುವಂತಿಲ್ಲ ಎಂದು ಸೂಚನೆ ನೀಡಿವೆ.
ಕಾರ್ಯಕ್ರಮದ ಅಂಗವಾಗಿ ಹಿಂದೂ ಕಾಲೇಜು, ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜು ಮತ್ತು ಜಾಕಿರ್ ಹುಸೇನ್ ಕಾಲೇಜುಗಳು ಕಾರ್ಯಕ್ರಮದ ನೇರ ಪ್ರಸಾರಕ್ಕೆ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಹಾಜರಾಗುವುದನ್ನು ಕಡ್ಡಾಯಗೊಳಿಸಿವೆ. ಕಾರ್ಯಕ್ರಮದ ಸಮಯದಲ್ಲಿ ಎಲ್ಲ ವಿದ್ಯಾರ್ಥಿಗಳ ಹಾಜರಾತಿಯು ಕಡ್ಡಾಯಗೊಳಿಸಲಾಗಿದೆ.
ವಿದ್ಯಾರ್ಥಿಗಳು ಗುರುತಿನ ಚೀಟಿ ತರಬೇಕು, ಆ ದಿನ ಕಪ್ಪು ಬಟ್ಟೆಯನ್ನು ಧರಿಸಬಾರದು ಎಂಬುದನ್ನು ಒಳಗೊಂಡು ಹಲವು ಸೂಚನೆಗಳನ್ನು ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜ್ಯಪಾಲರ ಭೇಟಿ: ರಾಜೀನಾಮೆ ಸಾಧ್ಯತೆ
ವಿಶ್ವವಿದ್ಯಾನಿಲಯದ ನಿರ್ದೇಶನಗಳ ಪ್ರಕಾರ, ವಿವಿಯ ವಿವಿಧೋದ್ದೇಶ ಸಭಾಂಗಣದಲ್ಲಿ ಭೌತಿಕವಾಗಿ ಹಾಜರಿರುವ ಹೊಸದಾಗಿ ನೇಮಕಗೊಂಡ ಶಿಕ್ಷಕರನ್ನು ಹೊರತುಪಡಿಸಿ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕಾಲೇಜಿನ ಗ್ರಂಥಾಲಯದಲ್ಲಿ ಶತಮಾನೋತ್ಸವ ಆಚರಣೆಗಳ ಸಮರ್ಪಣೆ ಕಾರ್ಯವನ್ನು ವೀಕ್ಷಿಸಲು ಕಡ್ಡಾಯವಾಗಿ ಹಾಜರಿರಬೇಕು ಎಂದು ಜಾಕಿರ್ ಹುಸೇನ್ ದೆಹಲಿ ಕಾಲೇಜು ತನ್ನ ಆದೇಶದಲ್ಲಿ ತಿಳಿಸಿದೆ.
ವಿವಿಯ ಹಲವಾರು ಇತರ ಕಾಲೇಜುಗಳ ಪ್ರಾಂಶುಪಾಲರು ಶತಮಾನೋತ್ಸವಕ್ಕೆ ಹಾಜರಾಗಲು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ವಿನಂತಿ ಮಾಡಿದ್ದಾರೆ. ಆದರೆ ದೆಹಲಿ ವಿಶ್ವವಿದ್ಯಾನಿಲಯ ಆಡಳಿತವು ಹಾಜರಾತಿಯನ್ನು ಕಡ್ಡಾಯಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗದವರು ಅದನ್ನು ನೇರ ಪ್ರಸಾರದ ಮೂಲಕ ನೋಡಲು ವ್ಯವಸ್ಥೆ ಮಾಡಲಾಗಿದೆ.