ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನೆಲೆ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ನ್ಯಾಯದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯ ಕೊಲಿಜಿಯಂ ಹೊರಡಿಸಿದ ಹೇಳಿಕೆಯಲ್ಲಿ, “ಹೈಕೋರ್ಟ್‌ಗಳಲ್ಲಿ ವೈವಿಧ್ಯತೆಯನ್ನು ಹೆಚ್ಚಿಸುವ ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಕೊಲಿಜಿಯಂ ಏಪ್ರಿಲ್ 15, 2025 ಮತ್ತು ಏಪ್ರಿಲ್ 19, 2025 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಿದೆ” ಎಂದು ತಿಳಿಸಿದೆ.
ಯಾರೆಲ್ಲಾ ವರ್ಗಾವಣೆ ?
ನ್ಯಾ. ಹೇಮಂತ್ ಚಂದನ ಗೌಡರ್: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣನ್ ನಟರಾಜನ್: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ. ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಕೆ. ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
ನ್ಯಾ.ಡಾ. ಕೆ. ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
Satyamev Jayate, Sadhvi Pragya Singh decison,kanunu dvate kanila naya ellagariu vande jai hind vandematram Bolo bharth mata ki jai,vote for Congress. Protection slum hindu terrisost target Ram Mandir bomb blast.