ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಾವಿತ್ರಮ್ಮ 9 ವೋಟು ಪಡೆದು ಉಪಾಧ್ಯಕ್ಷರಾಗಿ ಜಯಶೀಲರಾಗಿದ್ದಾರೆ, ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶ್ರೀಮತಿ ಮಂಜುಳಮ್ಮ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಭುವನಾಕ್ಷನವರು ಸ್ಪರ್ಧೆ ಮಾಡಿದ್ದರು, ಇಬ್ಬರಿಗೂ ಸರಿಸಮ 7 ಮತಗಳು ದೊರೆತಿತ್ತು. ನಂತರ ಚೀಟಿ ಮೂಲಕ ಒಬ್ಬರನ್ನು ಆಯ್ಕೆ ಮಾಡಲಾಯಿತು.
ಇದನ್ನೂ ಓದಿದ್ದೀರಾ?ಹಾಸನ l ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಕಾರಿನಲ್ಲಿ ಪತ್ತೆ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳು ಮತ್ತು ಸಕಲೇಶಪುರ ಕ್ಷೇತ್ರದ, ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ಇನ್ನಿತರರಿದ್ದರು.
