2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಅಥವಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಗೌರಿಬಿದನೂರು ರವರಿಂದ ಅರ್ಜಿಗಳನ್ನು ಪಡೆದು ಮೇ 3 ರ ಸಂಜೆ 5 ಗಂಟೆಯೊಳಗಾಗಿ ಸಂಬಂಧಪಟ್ಟ ಕಚೇರಿಗೆ ಸಲ್ಲಿಸಲು ಕೋರಿದೆ.
ಅರ್ಹತೆಗಳು:
ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. 5ನೇ ತರಗತಿಯಲ್ಲಿ ಶೇ 60% ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು 5ನೇ ತರಗತಿಯ ಅಂಕಪಟ್ಟಿ ಲಗತ್ತಿಸಬೇಕು. (ದೃಢಿಕೃತ ಪ್ರತಿಗಳು) ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ. 2 ಲಕ್ಷಗಳ ಒಳಗಿರಬೇಕು. 2025-26ನೇ ಸಾಲಿನಿಂದ ಅರ್ಹ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷೆ ಮುಖಾಂತರ ಆಯ್ಕೆ ಮಾಡಲಾಗುವುದು.
ಪ್ರತಿಷ್ಠಿತ ಶಾಲೆಗಳ ವಿವರ:
ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಗ್ರಾಮಾಂತರ ಆಂಗ್ಲ ಪ್ರೌಢಶಾಲೆ, ಅಗಲಗುರ್ಕಿ, ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಕನ್ನಡ ಮತ್ತು ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ, ಎಸ್.ಎಫ್.ಎಸ್ ಸ್ಕೂಲ್, ಎಂ.ಜಿ ರಸ್ತೆ, ಚಿಂತಾಮಣಿ, ಸೆಂಟ್ಸ್ ಆನ್ಸ್ ಸ್ಕೂಲ್ (ಐ.ಸಿ.ಎಸ್.ಇ) ಮಾದನಹಳ್ಳಿ, ಗೌರಿಬಿದನೂರು, ನ್ಯೂ ಹೊರೈಜೆನ್ ಇಂಗ್ಲೀಷ್ ಸ್ಕೂಲ್ ಚಿಕ್ಕಬಳ್ಳಾಪುರ, ಅರವಿಂದ ಪ್ರೈಮರಿ ಮತ್ತು ಹೈಸ್ಕೂಲ್ ರಾಮಪಟ್ಟಣ ರಸ್ತೆ, ಗುಡಿಬಂಡೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲುಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.