ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.23 ಮತ್ತು 24ರಂದು ನೂತನ ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮ ಮತ್ತು 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಅಧ್ಯಕ್ಷ ಕೋ.ಡಿ.ರಂಗಪ್ಪ ತಿಳಿಸಿದ್ದಾರೆ.
ಸಮ್ಮೇಳನಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬರುತ್ತಿದ್ದ ಅನುದಾನ ಬಂದಿಲ್ಲ. ಆದ್ದರಿಂದ, ಹಲವು ಇಲಾಖೆಗಳ ಸಹಕಾರದಿಂದ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಸರಕಾರಿ ನೌಕರರು ಸಾರ್ವಜನಿಕರ ವಿಶ್ವಾಸ ಗಳಿಸಿ; ಸಚಿವ ಎಂ.ಸಿ.ಸುಧಾಕರ್ ಸಲಹೆ
ಜಿಲ್ಲೆಯ ಎಲ್ಲಾ ಸಾಹಿತಿಗಳು, ಕಲಾವಿದರು ಮತ್ತು ಎಲ್ಲಾ ಕನ್ನಡ ಪರ, ರೈತಪರ, ದಲಿತಪರ, ಸಂಘ ಸಂಸ್ಥೆಗಳ ಮುಖ್ಯಸ್ಥರು, ಎಲ್ಲಾ ಸದಸ್ಯರು ಪದಾಧಿಕಾರಿಗಳು, ಜಿಲ್ಲೆಯ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.