ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ನೋಟಿಸ್

Date:

Advertisements

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇ.ಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ ಮಹೇಶ್‌ ಬಾಬು ನಟಿಸಿದ್ದರು.

ನಟಿಸಿದ್ದಕ್ಕೆ ಮಹೇಶ್‌ ಬಾಬು ಅವರಿಗೆ 5.9 ಕೋಟಿ ರೂ. ಸಂಭಾವನೆ ದೊರಕಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಮಹೇಶ್‌ ಬಾಬು ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ತೆಲಂಗಾಣ ಪೊಲೀಸರು ಹೈದರಾಬಾದ್ ಪ್ರಾಪರ್ಟೀಸ್ ಲಿಮಿಟೆಡ್‌ನ ನರೇಂದ್ರ ಸುರಾನಾ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಸತೀಶ್ ಚಂದ್ರ ಗುಪ್ತಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಅನಧಿಕೃತ ಲೇಔಟ್‌ಗಳಲ್ಲಿ ಪ್ಲಾಟ್‌ಗಳನ್ನು ಮಾರಾಟ ಮಾಡುವ ಮೂಲಕ ಖರೀದಿದಾರರನ್ನು ವಂಚಿಸಿದ್ದಾರೆ. ಒಂದೇ ಪ್ಲಾಟ್ ಅನ್ನು ಹಲವು ಬಾರಿ ಮಾರಾಟ ಮಾಡಿದ ಮತ್ತು ಆಸ್ತಿ ನೋಂದಣಿಗೆ ಸಂಬಂಧಿಸಿದಂತೆ ಸುಳ್ಳು ಭರವಸೆಗಳನ್ನು ನೀಡಿದ ಆರೋಪ ಕಂಪನಿಯ ಮೇಲಿದೆ.

ಯಾವುದೇ ವ್ಯಕ್ತಿಯು ಒಂದೇ ವಹಿವಾಟಿಗೆ ಅಥವಾ ಒಂದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯಿಂದ ದಿನದಲ್ಲಿ 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಸ್ವೀಕರಿಸುವಂತಿಲ್ಲ. ಈ ನಿಯಮವು ಶುಲ್ಕಗಳು, ದೇಣಿಗೆ, ಸಂಭಾವನೆ ಎಲ್ಲದ್ದಕ್ಕೂ ಅನ್ವಯವಾಗುತ್ತದೆ. ಈ ಮಿತಿಯನ್ನು ಉಲ್ಲಂಘಿಸಿದರೆ ಆದಾಯ ತೆರಿಗೆ ಕಾಯ್ದೆ 271ಡಿಎ ಅಡಿಯಲ್ಲಿ ಸ್ವೀಕರಿಸಿದ ಮೊತ್ತಕ್ಕೆ ಸಮಾನವಾದ ದಂಡ ವಿಧಿಸಲಾಗುತ್ತದೆ. 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತವನ್ನು ಯುಪಿಐ, ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್ ಮೂಲಕ ಪಾವತಿಸಬೇಕಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X