ರಾಜಸ್ಥಾನ, ಮಧ್ಯ ಪ್ರದೇಶದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್​ ಸಿದ್ಧತೆ

Date:

Advertisements

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಕರ್ನಾಟಕದ ಕೆಎಂಎಫ್ ಸಂಸ್ಥೆ ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಕೂಡ ತನ್ನ ಉತ್ಪನ್ನಗಳನ್ನು ವಿಸ್ತರಿಸಲು ಮುಂದಾಗಿದೆ.

ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್​​ ಚಿಂತನೆ ನಡೆಸಿದೆ. ದಕ್ಷಿಣ ಭಾರತದ ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್​ ಈ ಯೋಜನೆಗೆ ಮುಂದಾಗಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಹಾಲು ಸಂಗ್ರಹ ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್​ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ. ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂದು ಕೆಎಂಎಫ್ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ಮಾಧ್ಯಮವೊಂದು’ ವರದಿ ಮಾಡಿದೆ.

Advertisements

ಉತ್ತರ ಭಾಗದ ಮಾರುಕಟ್ಟೆಗಳಿಗೆ ಹತ್ತಿರದಲ್ಲಿ ಕೊ-ಪ್ಯಾಕೇಜಿಂಗ್ ಘಟಕಗಳನ್ನು ಸ್ಥಾಪಿಸುವ ಮೂಲಕ, ಹಾಲು ಮತ್ತು ಹಾಲಿನ ಉತ್ಪನ್ನಗಳ ಸಾಗಾಟ ದೂರವನ್ನು ಕಡಿಮೆ ಮಾಡುವುದು ಕೆಎಂಎಫ್ ಗುರಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸಂವಿಧಾನವೇ ಸಾರ್ವಭೌಮ’ ಎನ್ನುವ ಸತ್ಯ ಮರೆತರೇ ಧನಕರ್?

ಕೊ-ಪ್ಯಾಕೇಜಿಂಗ್ ಕೇಂದ್ರಗಳು ಕೆಎಂಎಫ್‌ಗೆ ಹತ್ತಿರದ ಸ್ಥಳಗಳಿಂದ ಅಥವಾ ಕರ್ನಾಟಕದಿಂದ ಹಾಲು ಅಥವಾ ಸಂಸ್ಕರಿಸಿದ ಡೈರಿ ಉತ್ಪನ್ನಗಳನ್ನು ಸ್ವೀಕರಿ ಶೇಖರಿಸಿ ಇಡಲು ಸಹಾಯ ಮಾಡುತ್ತವೆ. ಅಲ್ಲದೆ, ಮಾರುಕಟ್ಟೆಗೆ ಸನಿಹದಲ್ಲೇ ಅಂತಿಮ ಪ್ಯಾಕೇಜಿಂಗ್ ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಇದರಿಂದ ತಾಜಾ ಉತ್ಪನ್ನಗಳು ಚಿಲ್ಲರೆ ಮಾರಾಟ ಮಳಿಗೆಗಳನ್ನು ವೇಗವಾಗಿ ತಲುಪುವಂತೆ ಮಾಡಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಕೆಎಂಎಫ್ ತನ್ನ ಬೇಕರಿ ಮತ್ತು ಮಿಠಾಯಿ ವಿಭಾಗದ ಅಡಿಯಲ್ಲಿ ಬ್ರೆಡ್, ಬನ್ ಮತ್ತು ಕ್ರೀಮ್ ಬನ್ ಎಂಬ ಮೂರು ವಸ್ತುಗಳನ್ನು ಮಾತ್ರ ಮಾರಾಟ ಮಾಡುತ್ತಿದೆ. ಸ್ಲೈಸ್ ಕೇಕ್‌ಗಳು, ಹಣ್ಣಿನ ಕೇಕ್‌ಗಳು, ಕಪ್‌ಕೇಕ್‌ಗಳು, ಮಫಿನ್‌ಗಳು ಮತ್ತು ಇನ್ನೂ ಹೆಚ್ಚಿನ ಹೊಸ ಉತ್ಪನ್ನಗಳನ್ನು ಸೇರಿಸಿ ಉತ್ಪನ್ನಗಳನ್ನು ವಿಸ್ತರಿಸಲು ಚಿಂತನೆ ನಡೆಸಿದೆ. ಈ ಉತ್ಪನ್ನಗಳ ಅಡಿಯಲ್ಲಿ ಒಟ್ಟು 22 ರೂಪಾಂತರಗಳನ್ನು ಮಾರುಕಟ್ಟೆಗೆ ಪೂರೈಸಲು ಉದ್ದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X