ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದರು.

ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಶುಕ್ರವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ವೇಳೆ ಮಾತನಾಡಿದ ಸಿಎಂ, “ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುವುದು” ಎಂದು ಭರವಸೆ ನೀಡಿದರು.

Advertisements

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X