ಕೆರೆಯಲ್ಲಿ ಈಜಲು ತೆರಳಿದ್ದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಸಿರವಾರ ತಾಲ್ಲೂಕಿನ ಲಕ್ಕಂದಿನ್ನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹುಸೇನಿ (10) ಮೃತ ಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.ಬಾಲಕ ಲಕ್ಕಂದಿನ್ನಿ ಗ್ರಾಮದ ನಿವಾಸಿ ಎನ್ನಲಾಗಿದೆ.
ಗೆಳೆಯರ ಜೊತೆ ಈಜಲು ಹೋಗಿ ಈಜು ಬಾರದ ಕೆರೆಗೆ ಇಳಿದಿದ್ದಾನೆ.ಮೇಲಕ್ಕೆ ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಕೀಲ ಸದಾಶಿವ ರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಮೃತದೇಹವನ್ನು ಹೊರತೆಗೆದಿದ್ದು ಸ್ಥಳಕ್ಕೆ ಪಿಎಸ್ಐ ಭೇಟಿ ನೀಡಿ ಪರಿಶೀಲಿಸಿದರು.ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
