ಕೇವಲ ಕಾಂಗ್ರೆಸ್ ವಿರೋಧಿ ಧೋರಣೆಯ ಅತಿರೇಕದ ಫಲವಾಗಿ ಸಮಾಜವಾದಿಗಳು ಮತ್ತು ಕಮ್ಯುನಿಸ್ಟರು ಸೈದ್ಧಾಂತಿಕವಾಗಿ ವಿರುದ್ಧ ಧ್ರುವದಲ್ಲಿದ್ದ ಜನಸಂಘ ಮತ್ತು ಸ್ವತಂತ್ರ ಪಕ್ಷಗಳ ಜೊತೆ ಕೈ ಜೋಡಿಸಿದ್ದನ್ನು, ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ವಿರೋಧಿಗಳನ್ನು ಹಣಿಯಲು ಮುಂದಾದ ಇಂದಿರಾ ಗಾಂಧಿ ತಮ್ಮ ಅಧಿಕಾರ ಬಲವರ್ಧನೆ ಮತ್ತು ಬಡವರ ಪರವಾದ ನೀತಿಗಳು ಎರಡನ್ನೂ ಏಕಕಾಲಕ್ಕೆ ಪೊರೆಯಬಲ್ಲ ಕಾರ್ಯತಂತ್ರವನ್ನು ರೂಪಿಸುತ್ತಿದ್ದನ್ನು, ಕರ್ನಾಟಕದ ಬಹುತೇಕ ಚಿಂತಕರು ಮುಂದುವರಿದ, ಅನುಕೂಲವಂತ ಜಾತಿಗಳ ಹಿನ್ನೆಲೆಯಿಂದ ಬಂದಿರುವ ಕಾರಣಕ್ಕೂ ಅರಸು ಅವರ ಹಿಂದುಳಿದ ವರ್ಗಗಳ ರಾಜಕಾರಣದ ಕುರಿತು, ಅವರು…

ಬಿ. ಶ್ರೀಪಾದ ಭಟ್
ಶಿಕ್ಷಣ ತಜ್ಞರಾದ ಶ್ರೀಪಾದ ಭಟ್ ಅವರು, ಮೂಲತಃ ವಿಜಯನಗರ ಜಿಲ್ಲೆಯವರು. ದಲಿತ ಮತ್ತು ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯರಾಗಿರುವ ಇವರು, 'ಹಿಂದುತ್ವ ರಾಜಕಾರಣ - ಅಂದು ಇಂದು ಮುಂದು', 'ಬಿಸಿಲು, ಬಯಲು, ನೆಳಲು - ಹೊಸ ಅಲೆ ಸಿನಿಮಾ ಕುರಿತಾದ ಕಥನ', 'ಕಣ್ಕಟ್ಟು', 'ಸಾವಿತ್ರಿಬಾಯಿ ಫುಲೆ ಬದುಕು ಬರಹ' ಮೊದಲಾದ ಕೃತಿಗಳನ್ನು ಬರೆದಿದ್ದಾರೆ