ಮೈಸೂರು ದಶಪಥ ಹೆದ್ದಾರಿ | ಶ್ರೀರಂಗಪಟ್ಟಣದಲ್ಲಿ ಟೋಲ್ ಸಂಗ್ರಹಿಸದಂತೆ ಕೇಂದ್ರಕ್ಕೆ ತಡೆ ನೀಡಲು ಸಿಎಂಗೆ ಮನವಿ

Date:

Advertisements
  • ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ
  • ಕೇಂದ್ರ ಸರ್ಕಾರದ ಗಮನಕ್ಕೆ ತಂದು ಕೂಡಲೇ ಟೋಲ್ ಸಂಗ್ರಹಕ್ಕೆ ತಡೆ ನೀಡಲು ಕೋರಿಕೆ

ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

“ಬೆಂಗಳೂರಿನಿಂದ ಅಥವಾ ಮೈಸೂರಿನಿಂದ ಹೊರಟಾಗ ಒಂದು ಬಾರಿ ಟೋಲ್ ಶುಲ್ಕವನ್ನು ಕಟ್ಟಿಸಿಕೊಳ್ಳಲಾಗುತ್ತಿದೆ. ಈಗ ಶ್ರೀರಂಗಪಟ್ಟಣದಲ್ಲಿಯೂ ಟೋಲ್ ಕಟ್ಟಿಸಿಕೊಳ್ಳುತ್ತಿರುವುದು ಸಾರ್ವಜನಿಕರಿಗೆ ದುಪ್ಪಟ್ಟು ಹೊರೆಯಾಗಲಿದೆ. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು. ಹೀಗಾಗಿ ಮುಖ್ಯಮಂತ್ರಿಗಳು ಈ ಸಂಬಂಧ ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಬೇಕು” ಎಂದು ಕೋರಿದರು.

ಮನವಿ ಪತ್ರದಲ್ಲೇನಿದೆ?

Advertisements

ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯು ಮಾರ್ಚ್ ತಿಂಗಳಲ್ಲಿ ಲೋಕಾರ್ಪಣೆಗೊಂಡಿದೆ. ಇದರಿಂದ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿಗೆ ಶೀಘ್ರ ಸಂಚಾರಕ್ಕೆ ಅನುಕೂಲವಾಗಿದೆ ಎಂಬ ಅಂಶ ಬಿಟ್ಟರೆ ಇದು ಜನರಿಗೆ ನಿಜಕ್ಕೂ ಜೇಬು ಸುಡುವ ರಹದಾರಿಯಾಗಿದೆ. ಈ ಮಾರ್ಗದಲ್ಲಿ ಜನರು ಟೋಲ್ ಕಟ್ಟಿ ಕಟ್ಟಿ ಬಸವಳಿಯುವ ಸ್ಥಿತಿ ನಿರ್ಮಾಣವಾಗುತ್ತಿದೆ. ಈಗ ಇದ್ದದ್ದು ಸಾಲದೆಂಬಂತೆ ಶ್ರೀರಂಗಪಟ್ಟಣದಲ್ಲಿ ಸಹ ಇದೇ ಜುಲೈ 1ರಿಂದ ಟೋಲ್ ಸಂಗ್ರಹಕ್ಕೆ ಮುಂದಾಗಲಿರುವುದು ಜನರಿಗೆ ನುಂಗಲಾರದ ತುತ್ತಾಗಿದೆ.

‌ಉದ್ಘಾಟನೆಯಾಗಿ ಎರಡು ತಿಂಗಳು ಕಳೆಯುವಷ್ಟರಲ್ಲಿ ಈ ರೀತಿಯ ಜನರಿಗೆ ಹೊರೆಯಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಅಲ್ಲದೆ, ಬೆಂಗಳೂರಿನಿಂದ ಮೈಸೂರಿಗೆ ಸ್ವಂತ ವಾಹನದಲ್ಲಿ ಹೋಗಿ ಬರಲು ಟೋಲ್ ಶುಲ್ಕವಾಗಿಯೇ 500 ರೂಪಾಯಿ ಕಟ್ಟಬೇಕೆಂದರೆ ನಿಜಕ್ಕೂ ಪ್ರಯಾಣ ಎಂಬುದು ದುಸ್ತರವಾಗಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನಿನ ಅಗತ್ಯವಿದೆ

ಒಂದೆಡೆ ಆರಂಭಿಕ ಹಂತದಲ್ಲಿ ಟೋಲ್ ಶುಲ್ಕ ಬೀಳುತ್ತಿದೆ. ಇದನ್ನು ಜೂನ್‌ 1ರಿಂದಲೇ ಜಾರಿಗೆ ಬರುವಂತೆ ಶೇಕಡಾ 22ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿತ್ತು. ಮೊದಲೇ ಬೆಲೆ ಏರಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಇದು ದೊಡ್ಡ ಹೊರೆಯಾಗಲಿದೆ.

ಬಾಕಿ ಉಳಿದಿರುವ ಕಾಮಗಾರಿಗಳು ಹತ್ತಾರು ಇವೆ. ಅವುಗಳು ಇನ್ನೂ ಕುಂಟುತ್ತಾ ಸಾಗಿವೆ. ಕೇಳಿದರೆ ಕುಂಟು ನೆಪಗಳನ್ನು ಹೇಳಲಾಗುತ್ತಿದೆ. ಆದರೆ, ಜನರಿಂದ ದುಡ್ಡು ಪಡೆಯಲು ಮಾತ್ರ ಇದಾವುದೂ ಲೆಕ್ಕಕ್ಕೇ ಬಾರದು ಎಂದರೆ ಹೇಗೆ?

ಮಂಡ್ಯ ತಾಲೂಕಿನ ಹನಕೆರೆ ಅಂಡರ್ ಪಾಸ್, ಹಳೇ ಬೂದನೂರು ಹಾಗೂ ಹೊಸ ಬೂದನೂರು ನಡುವಿನ ಸರ್ವಿಸ್ ರಸ್ತೆಗೆ ನಿರ್ಮಾಣ ಮಾಡುತ್ತಿರುವ ಸೇತುವೆ ಸೇರಿದಂತೆ ಹಲವು ಕಾಮಗಾರಿಗಳು ಅಪೂರ್ಣವಾಗಿವೆ. ಈ ಹಂತದಲ್ಲಿ ಟೋಲ್ ಸಂಗ್ರಹ ಮಾಡುವುದು ಸರಿ ಅಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಡೆ ಖಂಡನಾರ್ಹವಾಗಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X