ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ದೊರಕಲಿದೆ. ಜೊತೆಗೆ ವಿಶೇಷ ಉಪನ್ಯಾಸವೂ ಇರಲಿದೆ.
ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ ಚಿತ್ರಕಲಾ ಪರಿಷತ್‌ನ ದೇವರಾಜ ಅರಸು ಗ್ಯಾಲರಿಯಲ್ಲಿ ನೂತನ ಸಂಘಕ್ಕೆ ಚಾಲನೆ ನೀಡಲಾಗುತ್ತದೆ. ಜೊತೆಗೆ ಅಂಬೇಡ್ಕರ್ ಜಯಂತಿ, ವಿಶ್ವ ಪುಸ್ತಕ ದಿನಾಚರಣೆ, ವಿಶೇಷ ಉಪನ್ಯಾಸ ಇರಲಿದೆ. ಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳು ವಿಷಯದಲ್ಲಿ ಸಾಹಿತಿ, ಚಿಂತಕ ರಹಮತ್ ತರೀಕೆರೆ ಅವರು ಉಪನ್ಯಾಸ ನೀಡಲಿದ್ದಾರೆ.
ಇದನ್ನು ಓದಿದ್ದೀರಾ? ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ
“ಕನ್ನಡ ಪುಸ್ತಕೋದ್ಯಮ ಓದುಗರ ಕೊರತೆ, ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟದಲ್ಲಿದೆ. ಇಂಥ ಸನ್ನಿವೇಶದಲ್ಲಿ ತಮ್ಮ ಪುಸ್ತಕ ಪ್ರಕಟಿಸಬೇಕೆಂಬ ಆಶಯ ಇರುವ ಲೇಖಕರು, ಪುಸ್ತಕ ಮಾರಾಟವನ್ನೇ ಬದುಕಾಗಿಸಿಕೊಂಡ ದೂರದೂರುಗಳ ಪುಸ್ತಕ ಮಾರಾಟಗಾರರು ಹಾಗೂ ಸಣ್ಣ ಪ್ರಕಾಶಕರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕೆಂಬ ಆಶಯದ ಅಭಿವ್ಯಕ್ತಿಯೇ ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘ” ಎಂದು ಸಂಘಕಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತೆ, ಪ್ರಕಾಶಕರು ಆರ್ ಪೂರ್ಣಿಮಾ ಆಗಮಿಸಲಿದ್ದಾರೆ. ಹೋರಾಟಗಾರ ಮಾವಳ್ಳಿ ಶಂಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
