ಗುಬ್ಬಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿದ್ಯುತ್ ಸ್ಪರ್ಶವಾಗಿ ಶಿಕ್ಷಕ ಸಾವು : ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯ

Date:

Advertisements

ಗ್ರಾಮ ಪಂಚಾಯಿತಿ ಅಬಿವೃದ್ದಿ ಅಧಿಕಾರಿಗಳು ಹಾಗೂ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಶಿಕ್ಷಕ ಲೋಕೇಶ್ ರಾವ್ ಎಂಬಾತ ಸಾವನ್ನಪ್ಪಿದ್ದು ಮುಂದಿನ ದಿನಗಳಲ್ಲಿ ಇಲಾಖೆಯ ಅಧಿಕಾರಿಗಳು ಎಚ್ಚೆತ್ತು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಗುಬ್ಬಿ ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.

ಗುಬ್ಬಿ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ದಿಢೀರ್ ಆಗಮಿಸಿದ ರೈತರ ಸಂಘದ ಪದಾಧಿಕಾರಿಗಳು ಅಧಿಕಾರಿಗಳ ಬೇಜವಾಬ್ದಾರಿತನದಿಂದ ಗ್ರಾಮೀಣ ಭಾಗದ ವಿದ್ಯುತ್ ಕಂಬಗಳ ವೈರ್ ಗಳು ಯಾವುದೇ ಸುರಕ್ಷತೆ ಕಾಣದಾಗಿದೆ. ಅಸುರಕ್ಷಿತ ಬೀದಿ ದೀಪ ಆರಿಸಲು ಹೋದ ಶಾಲಾ ಶಿಕ್ಷಕ ಸಾವಿಗೀಡಾಗಿದ್ದು, ಇದಕ್ಕೆ ಹೊಣೆಗಾರಿಕೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ನೊಂದ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಗುಬ್ಬಿ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ನಿಟ್ಟೂರು ಹೋಬಳಿಯ ಬ್ಯಾಡಿಗೆರೆ ಗ್ರಾಮದ ಶಾಲಾ ಶಿಕ್ಷಕರಾಗಿದ್ದ ಲೋಕೇಶ್ ರಾವ್ ಅವರ ಸಾವಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ಬೆಸ್ಕಾಂ ಅಧಿಕಾರಿಗಳು ಕಾರಣ. ಕೇವಲ 60 ರೂಪಾಯಿ ವೆಚ್ಚ ಭರಿಸಿ ವಿದ್ಯುತ್ ಕಂಬಗಳ ನಿರ್ವಹಣೆ ಮಾಡಲಾಗದ ಸ್ಥಿತಿ ಗುಬ್ಬಿ ತಾಲ್ಲೂಕಿನಾದ್ಯಂತ ಇದೆ. ಈ ಕೂಡಲೇ ಬೀದಿ ದೀಪ ಅಳವಡಿಸಿರುವ ಕಂಬಗಳಿಗೆ ಕೂಡಲೇ ಡಿ.ಪಿ.ಸ್ವಿಚ್ ಅಳವಡಿಸಿ ಜನರ ಜೀವ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದ. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಭವಿಸುವ ಅವಘಡಗಳಿಗೆ ನೇರ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisements

ರೈತ ಸಂಘದ ನಿಟ್ಟೂರು ಹೋಬಳಿ ಅಧ್ಯಕ್ಷ ಮಹದೇವಯ್ಯ ಮಾತನಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಪಾಠ ಮಾಡುವ ಸುಶಿಕ್ಷಿತ ಲೋಕೇಶ್ ರಾವ್ ಬೀದಿ ದೀಪ ಆರಿಸುವ ಕಾಯಕ ನಿತ್ಯ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ ಸುರಕ್ಷತೆ ಇಲ್ಲದ ಕಂಬ ಶಿಕ್ಷಕರ ಜೀವ ಪಡೆದಿದೆ. ಎಲ್ಲಾ ಗ್ರಾಮಗಳಲ್ಲೂ ಈ ಅವ್ಯವಸ್ಥೆ ಇದ್ದೇ ಇದೆ. ಬೀದಿ ದೀಪ ಹಾಕುವ ಕಾರ್ಯ ಪಂಚಾಯಿತಿಯ ಸಿಬ್ಬಂದಿಗಳು ನಿರ್ವಹಿಸಬೇಕು. ಎಲ್ಲಾ ರೀತಿಯ ಸುರಕ್ಷತೆಗೆ ಬೆಸ್ಕಾಂ ಅಧಿಕಾರಿಗಳ ಜೊತೆಗೂಡಿ ಗ್ರಾಮ ಪಂಚಾಯಿತಿ ಕರೆಂಟ್ ಬಗ್ಗೆ ಎಚ್ಚರಿಕೆ ವಹಿಸಬೇಕು. ಈಗ ನಡೆದ ಅವಘಡಕ್ಕೆ ಮುಖ್ಯಮಂತ್ರಿಗಳು ಸೂಕ್ತ ಪರಿಹಾರವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗುಬ್ಬಿ ತಹಶೀಲ್ದಾರ್ ಆರತಿ ಅವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಈಗಾಗಲೇ ನಿರ್ಲಕ್ಷಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಮುಂದೆ ಸಂಭವಿಸಬಹುದಾದ ಅವಘಡಗಳಿಗೆ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ರೈತ ಮುಖಂಡರಾದ ಸತ್ತಿಗಪ್ಪ, ಯತೀಶ್, ಬಸವರಾಜಪ್ಪ, ಸುರೇಶ್, ಮಾದೇವಯ್ಯ, ಜಗದೀಶಪ್ಪ, ತಮ್ಮಯಣ್ಣ, ಬಸವರಾಜು, ಜಗದೀಶ್, ಸಣ್ಣಪ್ಪ ಹಾಗೂ ಇನ್ನಿತರರು ಸ್ಥಳದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X