ಲೇಖಕ, ಚಿಂತಕ, ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಚ್ ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರಿನ ಕುಂಟಿಕಾನ ಸಮೀಪದ ದೇರೇಬೈಲ್ ಕೊಂಚಾಡಿಯ ಗಿರಿನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ಅವರು ಮೃತಪಟ್ಟಿರುವುದು ಶನಿವಾರ ಬೆಳಗ್ಗೆ ತಿಳಿದುಬಂದಿದೆ.
ಪಟ್ಟಾಭಿರಾಮ ಸೋಮಯಾಜಿ ಅವರಿಗೆ 64 ವರ್ಷ ವಯಸ್ಸಾಗಿತ್ತು. ಮಂಗಳೂರು ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರು ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಸದ್ಯ ಅವರ ಪಾರ್ಥೀವ ಶರೀರವು ಮಂಗಳೂರಿನ ಕುಂಟಿಕಾನದಲ್ಲಿರುವ ಏ.ಜೆ. ಆಸ್ಪತ್ರೆಯಲ್ಲಿ ಇದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಕಾವೂರು ಠಾಣಾ ಪೊಲೀಸರು ಮೃತದೇಹವನ್ನು ಹಸ್ತಾಂತರಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕ ಲೇಖಕಿಯರ ಸಂಘಕ್ಕೆ 1 ಕೋಟಿ ರೂ. ವಿಶೇಷ ಅನುದಾನ ನೀಡಲು ಸಿಎಂಗೆ ಮನವಿ
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುರಾಡಿ ನೀಲಾವರದಲ್ಲಿರುವ ಪಟ್ಟಾಭಿರಾಮ ಸೋಮಯಾಜಿ ಅವರ ಅಕ್ಕನ ಮನೆಯಲ್ಲಿ ಭಾನುವಾರ (ಜು.2) ಅಂತ್ಯಕ್ರಿಯೆ ನಡೆಯಲಿದೆ ಎಂದು ಈ ದಿನ.ಕಾಮ್‌ಗೆ ಕುಟುಂಬ ಸಂಬಂಧಿಕರು ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ.