ಕಲಬುರಗಿ | ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ: ‌ಭೀಮ್ ಆರ್ಮಿ ಖಂಡನೆ

Date:

Advertisements

ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ನಡೆದ ಕೊಲೆ ಯತ್ನದ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಆಗ್ರಹಿಸಿ ಭೀಮ್ ಆರ್ಮಿ ಕಲಬುರಗಿ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಭೀಮ್ ಆರ್ಮಿ ಜಿಲ್ಲಾ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟಿಸಿದರು. ಸಹರಾನ್‌ಪುರದ ದೇವಬಂದ್‌ನಲ್ಲಿ ಮನುವಾದಿ ಚಿಂತನೆಯ ಕೆಲವು ಅಪರಿಚಿತ ದಾಳಿಕೋರರು ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರ ಮೇಲೆ ಯೋಜಿತ ಹತ್ಯೆಯ ದಾಳಿ ನಡೆಸಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ. ಕೊಲೆಯತ್ನ ನಡೆಸಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಬೇಕು” ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ ಒತ್ತಾಯಿಸಿದರು.

“ಈ ಹಿಂದೆ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರು ತಮ್ಮ ಸುರಕ್ಷತೆ ಮತ್ತು ಜೀವಕ್ಕೆ ಬೆದರಿಕೆಯ ಬಗ್ಗೆ ನೋಂದಾಯಿತ ಪೋಸ್ಟ್ ಮೂಲಕ ಸಹರಾನ್‌ಪುರ ಎನ್‌ಎಸ್‌ಪಿ ಮತ್ತು ಡಿಜಿಪಿ ಪೊಲೀಸ್ ಮತ್ತು ಮುಖ್ಯಮಂತ್ರಿಗೆ ತಿಳಿಸಿದ್ದರು. ಆದರೆ ಸರ್ಕಾರದ ಆಡಳಿತ ಉದ್ದೇಶಪೂರ್ವಕವಾಗಿ ಅವರ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನಿರಾಶಾದಾಯಕವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಸರ್ಕಾರದ ಆಡಳಿತದ ಸಂಪೂರ್ಣ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಆಡಳಿತದ ಎಡಬಿಡಂಗಿ ಧೋರಣೆಯಿಂದಾಗಿ ರಾಜ್ಯದಲ್ಲಿ ಇಂತಹ ಘಟನೆಗಳು ಹೆಚ್ಚಿದ್ದು, ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ ಆಜಾದ್ ಅವರು ಬಹುಜನ ಸಮಾಜದ ಜನಪ್ರಿಯ ನಾಯಕರಾಗಿದ್ದು, ಲಕ್ಷಾಂತರ ಬಹುಜನ ಸಮಾಜದ ಜನರು ನಂಬಿಕೆ ಮತ್ತು ವಿಶ್ವಾಸ ಹೊಂದಿದ್ದಾರೆ. ಈ ಘಟನೆಯಿಂದಾಗಿ ಸಮಾಜದ ಲಕ್ಷಾಂತರ ಜನರ ಭಾವನೆಗಳಿಗೆ ತೀವ್ರ ನೋವಾಗಿದೆ” ಎಂದರು.

ಈಈ ಸುದ್ದಿ ಓದಿದ್ದೀರಾ? ಸಾಮಾಜಿಕ ಹೋರಾಟಗಾರ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

“ತಪ್ಪಿತಸ್ಥ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧವೂ ರಾಸುಕಾ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಗೌರವಾನ್ವಿತ ಚಂದ್ರಶೇಖರ ಆಜಾದ್ ಅವರ ಭದ್ರತೆಯನ್ನು ಬಲಪಡಿಸುವ ಮೂಲಕ ಅವರಿಗೆ ತಡಮಾಡದೆ ವಿಶೇಷ ನ್ಯಾಯಧೀಶರ ಭದ್ರತೆ ಒದಗಿಸಬೇಕು. ಆದುದರಿಂದ ಸಮಸ್ತ ಬಹುಜನ ಸಮಾಜ ಹಾಗೂ ಲಕ್ಷಾಂತರ ಜನರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗುಂಡಪ್ಪ ಮಾಳಗೆ, ಸುಭಾಷ್ ಆಲೂರ್, ಸುಧೀರ, ಬಸವರಾಜ ಹೆಡೆ, ಶಿವಶರಣ ಕಲ್ಲೂರು, ಹುಸನಪ್ಪಾ ರದ್ದೆವಾಡಗಿ, ಅಬ್ದುಲ್ ಘನಿ ರಾವಣ, ಸಂದೀಪ ದೊಡ್ಡಮನಿ, ವಿಶ್ವರಾಧ್ಯ ಗೋಪಾಲಕರ್, ಬಸವರಾಜ ಇಂಗಳಗಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X