ಮಹಾರಾಷ್ಟ್ರ | ಭೀಕರ ಬಸ್‌ ದುರಂತ; ಮೂವರು ಮಕ್ಕಳು ಸೇರಿ 25 ಜನ ಸಜೀವ ದಹನ

Date:

Advertisements
  • ಮಹಾರಾಷ್ಟ್ರದ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ಬಸ್ ದುರಂತ
  • ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ, ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ

ಮಹಾರಾಷ್ಟ್ರದಲ್ಲಿ ಶನಿವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದ್ದು, ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 25 ಜನ ಸಾವನ್ನಪ್ಪಿದ್ದಾರೆ.

ಈ ಬಸ್‌ನಲ್ಲಿ ಒಟ್ಟು 32 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 25 ಜನ ಸಾವನ್ನಪ್ಪಿದ್ದು, ಶವಗಳನ್ನು ಹೊರತೆಗೆಯಲಾಗಿದೆ. 6 ರಿಂದ 8 ಜನ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ಬಾಬುರಾವ್ ಮಹಾಮುನಿ ಹೇಳಿದ್ದಾರೆ.

“ನಾಗ್ಪುರದಿಂದ ಪುಣೆಗೆ ಹೋಗುತ್ತಿದ್ದ ಈ ಬಸ್ ಸಮೃದ್ಧಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಮುಂಜಾನೆ 2 ಗಂಟೆಗೆ ಭೀಕರ ಅಪಘಾತ ಸಂಭವಿಸಿದೆ. ಟೈರ್ ಸ್ಪೋಟಗೊಂಡ ಬಳಿಕ ಬಸ್‌ ಹೆದ್ದಾರಿಯಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ನಂತರ ಬಸ್‌ನ ಡೀಸೆಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisements

“ಬಸ್‌ನಲ್ಲಿ ಇಬ್ಬರು ಚಾಲಕರಿದ್ದು, ಈ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಟೈರ್ ಒಡೆದು ಬಸ್‌ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ” ಎಂದು ಗಾಯಾಳು ಬಸ್‌ ಚಾಲಕ ಹೇಳಿದ್ದಾರೆ.

ಚಾಲಕ ನಿದ್ರೆಗೆ ಜಾರಿದ ಕಾರಣ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ವರದಿ ತಿಳಿಸಿದೆ.

ಕೇಂದ್ರದಿಂದ ₹2 ಲಕ್ಷ, ರಾಜ್ಯ ಸರ್ಕಾರದಿಂದ ₹5 ಲಕ್ಷ ಪರಿಹಾರ

ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತಲಾ ₹5 ಲಕ್ಷ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಲಾ ₹2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

“ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತ ಅತ್ಯಂತ ದುಃಖ ತಂದಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

ಗಣ್ಯರ ಕಂಬನಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, “ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತ ತೀವ್ರ ದುಃಖ ತಂದಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಸ್ಥಳೀಯ ಆಡಳಿತ ಮಂಡಳಿ ನೆರವು ನೀಡುತ್ತಿದೆ. ಮೃತರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ನೀಡಲಾಗುವುದು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X