ಜಮ್ಮು ಕಾಶ್ಮೀರ ದಾಳಿ: ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ

Date:

Advertisements

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ʼಏಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ 26 ಜನರು ಮೃತಪಟ್ಟ ಸಶಸ್ತ್ರ ದಾಳಿಯನ್ನು ಪ್ರಧಾನ ಕಾರ್ಯದರ್ಶಿಗಳು ಬಲವಾಗಿ ಖಂಡಿಸುತ್ತಾರೆʼ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಪರವಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರಣ್ ಹುಲ್ಲುಗಾವಲಿನಲ್ಲಿ ಮಂಗಳವಾರ ಮಧ್ಯಾಹ್ನ ಮೂವರು ಶಂಕಿತ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇವರಲ್ಲಿ ಇಬ್ಬರು ವಿದೇಶಿಯರು ಸೇರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಇದು ಜಮ್ಮುಕಾಶ್ಮೀರದಲ್ಲಿ ನಡೆದಿರುವ ಇತ್ತೀಚಿನ ಅತಿ ದೊಡ್ಡ ಭಯೋತ್ಪಾದಕ ದಾಳಿಯಾಗಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ,ಇದು ಹೇಯ ಕೃತ್ಯವಾಗಿದೆ ಎಂದು ಹೇಳಿದ್ದರು.

ಉಗ್ರರ ಗುಂಡಿಗೆ ಸಿಲುಕಿ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಈ ದಾಳಿ ನಡೆದಿದೆ. ಮೃತಪಟ್ಟವರಲ್ಲಿ ಇಬ್ಬರು ವಿದೇಶಿಯರು, ಇಬ್ಬರು ಸ್ಥಳೀಯರು ಇದ್ದಾರೆ.

ಪಾಕಿಸ್ತಾನದಲ್ಲಿ ನೆಲೆಗೊಂಡಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ‘ಲಷ್ಕರ್–ಎ–ತಯ್ಯಬಾ’ದ ಜೊತೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್‌ ಫ್ರಂಟ್‌’ ಈ ದಾಳಿಯನ್ನು ತಾನೇ ನಡೆಸಿರುವುದಾಗಿ ಹೇಳಿಕೊಂಡಿದೆ.

ಭಯೋತ್ಪಾದಕರು ಜಮ್ಮುವಿನ ಕಿಶ್ತವಾಢ ದಿಂದ, ಕೋಕರ್ನಾಗ್ ಮೂಲಕ ಬೈಸರನ್‌ಗೆ ಬಂದಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X