ರಾಯಚೂರು | ವಕ್ಫ್ ಮಸೂದೆ ಅಂಗೀಕಾರದ ವಿರುದ್ಧ ಅಭಿಯಾನ; ವೆಲ್ಫೇರ್ ಪಾರ್ಟಿ ಕರೆ

Date:

Advertisements

ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರ ಸಂವಿಧಾನ ವಿರೋಧಿ ಕಾಯಿದೆವಾಗಿದೆ.ಇದರ ವಿರುದ್ಧವಾಗಿ ದೇಶಾದ್ಯಂತ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಹೋರಾಟಕ್ಕೆ ಕರೆ ನೀಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶೇಖ್ ಬಾಬಾ ಹುಸೇನ್ ಹೇಳಿದರು.

ಮಾನ್ವಿ ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಈ ಅಸಂವಿಧಾನಿಕ ತಿದ್ದುಪಡಿಯ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪವಾಗಿದೆ. ಇದನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಖಂಡಿಸುತ್ತದೆ ಎಂದರು.

ಇದರ ಅಂಗವಾಗಿ ರಾಜ್ಯದ್ದಲಿ ವಕ್ಪ್ ಸಂರಕ್ಷಣೆ ನಮ್ಮ ಹೊಣೆ ಎಂಬ ಶೀರ್ಷಿಕೆ ಅಡಿಯಲ್ಲಿ ಏಪ್ರಿಲ್ 20 ರಿಂದ 27ರ ವರೆಗೆ ರಾಜ್ಯವ್ಯಾಪಿ ಚಳುವಳಿ ಹಮ್ಮಿಕೊಂಡಿದೆ. ಈ ಚಳುವಳಿಯ ಭಾಗವಾಗಿ ರಾಜ್ಯದಾದ್ಯಂತ ಪತ್ರಿಕಾ ಘೋಷ್ಠಿ, ಬಿತ್ತಿ ಪತ್ರ, ವಿಚಾರಗೋಷ್ಠಿಗಳು, ಪ್ರತಿಭಟನೆ, ಧರಣಿ ಸತ್ಯಾಗ್ರಹ, ಪಾದಯಾತ್ರೆ, ಸಹಿ ಸಂಗ್ರಹಣೆ, ಕರಪತ್ರ ಹಂಚಿಕೆ, ಹೀಗೆ ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಒಪ್ಪಲಾಗದು. ಸರ್ಕಾರ ಈ ಕಾಯ್ದೆ ವಾಪಸ್ ಪಡೆಯವವರೆಗೂ ಹೋರಾಟ ನಡೆಸಲಾಗುವುದು, ಇದು ಕೇವಲ ಒಂದು ಸಮುದಾಯದ ವಿಷಯವಲ್ಲದೆ ಸಂವಿಧಾನ ವಿರೋಧಿ ನಡೆಯಾಗಿದ್ದು ರಾಜ್ಯದ ಎಲ್ಲಾ ನಾಗರಿಕರು ಈ ಹೋರಾಟಕ್ಕೆ ಬೆಂಬಲಿಸಬೇಕು’ ಎಂದು ಅವರು ಮನವಿ ಮಾಡಿದರು.


ಪಕ್ಷದ ಮುಖಂಡರಾದ ಶೇಖ್ ಫರೀದ್ ಉಮರಿ, ನಾಸೀರ್ ಅಲಿ, ಎಮ್ಎಎಚ್ ಮುಖೀಮ್, ಶೇಖ್ ಮಹೆಬೂಬ, ಹಬೀಬ್ ಸಹರಾ,ಯುನೂಸ್ ನಾಯ್ಕ, ಶೇಖ್ ಅಹ್ಮದ್ ಹುಸೇನ್ ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X