ಇದು ರಾಜಕೀಯದ ಸಮಯವಲ್ಲ, ದುಃಖಿತರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

Date:

Advertisements

ಇದು ರಾಜಕೀಯ ಮಾಡುವ ಸಮಯವಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದರು. ಉಗ್ರರು ಪ್ರವಾಸಿಗರನ್ನು ಹತ್ಯೆ ಮಾಡಿರುವ ದುರದೃಷ್ಟಕರ ಘಟನೆ ನಡೆದಿದೆ. ಉಗ್ರರು ಅಮಾಯಕರನ್ನ ಕೊಂದಿದ್ದಾರೆ. ಇದು ತುಂಬಾ ದುಃಖಕರ ಸಂಗತಿ, ಕಾಂಗ್ರೆಸ್ ಪಕ್ಷ ಉಗ್ರರ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಘಟನೆ ದೇಶದ ಒಗ್ಗಟ್ಟು, ಐಕ್ಯತೆ ಮೇಲಿನ ದಾಳಿ ಎಂದಿದ್ದಾರೆ.

ಘಟನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಹಾಗೂ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾರೊಂದಿಗೆ ಮಾತನಾಡಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ನಾಯಕರ ಜೊತೆಯೂ ಮಾತಾಡಿದ್ದೇನೆ. ಯಾರು ಈ ಕೃತ್ಯದ ಹಿಂದಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ. ಇದು ರಾಜಕೀಯ ಮಾಡುವ ಸಮಯ ಅಲ್ಲ. ಮೃತಪಟ್ಟ ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ. ಹಾಗಾಗಿ ಈ ವಿಚಾರದಲ್ಲಿ ಒಟ್ಟಾಗಿ ಹೋರಾಡಬೇಕು ಎಂದು ಖರ್ಗೆ ಹೇಳಿದ್ದಾರೆ.

Advertisements

ಕರ್ನಾಟಕದ ಮಂಜುನಾಥ್ ರಾವ್, ಭರತ್ ಭೂಷಣ್ ಮೃತರಾಗಿದ್ದಾರೆ. ಅವರ ಪತ್ನಿಯರಾದ ಪಲ್ಲವಿ, ಸುಜಾತ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಕೂಡ ಹೋಗಿದ್ದಾರೆ. ಅವರ ಜೊತೆಯೂ ಮಾತನಾಡಿದ್ದೇನೆ. ಕರ್ನಾಟಕದಿಂದ 200 ಪ್ರವಾಸಿಗರು ಹೋಗಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಘಟನೆಯ ಬಗ್ಗೆ ಒಮರ್ ಅಬ್ದುಲ್ಲಾ ಅವರ ಜೊತೆಯೂ ಮಾತಾಡಿದ್ದೇನೆ. ಕೇಂದ್ರ ಸರ್ಕಾರದ ಜವಾಬ್ದಾರಿಯೂ ಹೆಚ್ಚಿದೆ. ಉಗ್ರರನ್ನು ಬಗ್ಗುಬಡಿಯಬೇಕು. ಮೃತರಿಗೆ ಸಂತಾಪ ಸೂಚಿಸುತ್ತೇವೆ. ಕಾಂಗ್ರೆಸ್ ಪಕ್ಷ ಕುಟುಂಬದವರ ಜೊತೆ ಇದೆ. ಇದು ಭಾರತದ ಮೇಲಿನ ನೇರ ದಾಳಿಯಾಗಿದೆ. ಪಾಕಿಸ್ತಾನಿ ಪ್ರಾಯೋಜಿತ ಉಗ್ರ ಚಟುವಟಿಕೆಗಳನ್ನ ಬಗ್ಗು ಬಡಿಯಬೇಕು ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಪ್ರವಾಸಿಗರಿಗೆ ರಕ್ಷಣೆ ಒದಗಿಸಬೇಕು. ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅಮರನಾಥ ಯಾತ್ರೆಯ ಭದ್ರತೆ ಕೂಡಾ ಬಿಗಿ ಮಾಡಬೇಕು. ಉಗ್ರರ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರ್ಕಾರದ ಜೊತೆ ನಾವು ಇರುತ್ತೇವೆ. ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆಯಲಿ. ಇದು ರಾಜಕೀಯ ಮಾಡಲು ಅಲ್ಲ. ಆದರೆ ಎಲ್ಲರಿಂದಲೂ ಸಲಹೆ ಪಡೆಯಿರಿ. ಎಲ್ಲರೂ ಒಂದಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

Download Eedina App Android / iOS

X