ಕಾಶ್ಮೀರದ ಪೆಹಲ್ಗಾಮ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದು ಇದಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಆರೊಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿ ಖಂಡನೀಯ. ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಈ ದಾಳಿ ಕಾರಣ ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.ಕಾಶ್ಮೀರದಲ್ಲಿ ಪಹಲ್ಗಾಮ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 26 ಅಧಿಕ ಜನ ಮೃತಪಟ್ಟಿದ್ದು, ಉಗ್ರರು ಒಳಗೆ ನುಸುಳಿ ಪ್ರವಾಸಿಗರ ಮೇಲೆ ದಾಳಿ ಮಾಡಿರುವುದು ಭದ್ರತಾ- ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಭದ್ರತೆಯಲ್ಲಿ ವಿಫಲವಾಗಿದ್ದರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಓರ್ವ ಗಂಭೀರ ಗಾಯ
ಯೂತ್ ಕಾಂಗ್ರೆಸ್ ರಾಜ್ಯ ಮುಖಂಡ ಫೈಜಲ್ ಖಾನ್ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಮೃತಪಟ್ಟಿದ್ದು, ಇದಕ್ಕೆ ಕೇಂದ್ರ ಸರ್ಕಾರವೇ ನೇರವಾಗಿ ಹೊಣೆ ಹೊರಬೇಕು. ಪ್ರಶಾಂತವಾಗಿದ್ದ ಕಾಶ್ಮೀರ ಈಗ ಮತ್ತೆ ಉಗ್ರರ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದ್ದರಿಂದ ಉಗ್ರರು ದಾಳಿ ನಡೆಸುವಂತಾಗಿದೆ ಎಂದು ದೂರಿದರು.
ಕಾಶ್ಮೀರದಲ್ಲಿ 370 ಹಿಂಪಡೆದಿದ್ದರಿಂದ ಯಾವುದೇ ರೀತಿಯ ಘಟನೆಗಳು ನಡೆಯುತ್ತಿಲ್ಲವೆಂದು ತಿಳಿಸಲಾಗಿತ್ತು. ಈಗ ಮತ್ತೆ ಅಲ್ಲಿ ಉಗ್ರರ ಅಟ್ಟಹಾಸ ಮೆರೆದಿದ್ದಾರೆ. ಇದರಿಂದ ಅಲ್ಲಿ ಜನ ಮತ್ತೆ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ ಎಂದರು.
ಯೂತ್ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ, ರಾಜ್ ಮುಖಂಡ ಹುಸೇನ್ ಬಾಷ ಸೈವಾಜ್, ಗೌಸ್, ಮಹ್ಮದ್ ಅನೀಫ್, ಖಾಜಾ ಅಸ್ಲಂ, ಮಹ್ಮದ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
