ಚಿಕ್ಕಬಳ್ಳಾಪುರ | ರಸ್ತೆ ವಿಚಾರಕ್ಕೆ ಗಲಾಟೆ; ಕ್ರಷರ್‌ ಮಾಲೀಕನಿಂದ ವ್ಯಕ್ತಿ ಕಾಲಿಗೆ ಗುಂಡೇಟು

Date:

Advertisements

ರಸ್ತೆ ವಿಚಾರಕ್ಕೆ ಕ್ರಷರ್‌ ಮಾಲೀಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ರಷರ್ ಮಾಲೀಕ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಗ್ರಾಮದ ಬಳಿ ಬುಧವಾರ ನಡೆದಿದೆ.

ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಬಳಿ ಮಾಜಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ್‌ ಎಂಬಾತ ಜಲ್ಲಿ ಕ್ರಷರ್‌ ಪರವಾನಗಿ ಪಡೆದಿದ್ದು, ದಾರಿಯ ವಿಚಾರವಾಗಿ ಸ್ಥಳೀಯರು ಮತ್ತು ಕ್ರಷರ್‌ ಮಾಲೀಕರ ನಡುವೆ ಹಲವು ದಿನಗಳಿಂದ ಗಲಾಟೆ ನಡೆಯುತ್ತಿತ್ತು.

ಕ್ರಷರ್‌ಗೆ ಅವಕಾಶ ಕೊಡಬಾರದು ಎಂದು ಸ್ಥಳೀಯರು ಹಲವು ಬಾರಿ ಪ್ರತಿಭಟನೆಯನ್ನು ನಡೆಸಿದ್ದರು. ಇದೇ ವಿಚಾರವಾಗಿ ಶಾಸಕ ಪ್ರದೀಪ್‌ ಈಶ್ವರ್‌, ಸ್ಥಳೀಯರು ಮತ್ತು ಕ್ರಷರ್‌ ಮಾಲೀಕರನ್ನು ಕರೆಸಿ ಸಂದಾನ ಸಭೆಯನ್ನೂ ನಡೆಸಿದ್ದರು ಎನ್ನಲಾಗಿದೆ.

Advertisements

ವಿಡಿಯೋ ಲಿಂಕ್‌ : https://www.facebook.com/share/v/15DkXUTsv3/

ಬುಧವಾರ ಮಧ್ಯಾಹ್ನದ ಸುಮಾರಿನಲ್ಲಿ ಕ್ರಷರ್‌ ಮಾಲೀಕ ಸಕಲೇಶ್‌ ಸಹಚರರು ಕ್ರಷರ್‌ಗೆ ದಾರಿ ಮಾಡಲು ಮುಂದಾಗಿದ್ದು, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಕ್ರಷರ್‌ ಮಾಲೀಕ ಸಕಲೇಶ್‌ ರವಿ ಎಂಬಾತನ ಕಾಲಿಗೆ ತನ್ನ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿ, ಸ್ಥಳೀಯರಿಗೆ ಬೆದರಿಕೆ ಹಾಕಿದ್ದಾನೆ.

Screenshot 2025 04 23 19 05 48 95 99c04817c0de5652397fc8b56c3b3817 1

ಗಾಯಾಳು ರವಿ ಎಂಬಾತನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X