ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಕೊಂದು, ತುಂಡು-ತುಂಡಾಗಿ ಕತ್ತರಿಸುತ್ತೇನೆ ಎಂದು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಗೃಹ ಸಚಿವರು, ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್‌ಗಳಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರನ್ನು ಕೊಲ್ಲುತ್ತೇನೆಂದು ಇ-ಮೇಲ್ ಸಂದೇಶ ಬಂದಿದೆ. ಅದರಲ್ಲಿ; “ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ಕೊಲ್ಲುತ್ತೇನೆ. ತುಂಡು-ತುಂಡಾಗಿ ಕತ್ತರಿಸಿ, ಫ್ರಿಡ್ಜ್ ಮತ್ತು ಟ್ಯಾಲಿ ಬ್ಯಾಗ್‌ನಲ್ಲಿ ತುಂಬುತ್ತೇನೆ” ಎಂದು ಬೆದರಿಕೆ ಹಾಕಲಾಗಿದೆ.
ಅಲ್ಲದೆ, “ಬೆಂಗಳೂರಿನ ರಾಮಪುರದ ಪ್ರಭಾಕರ್‌ಗೆ 1 ಕೋಟಿ ರೂ. ಸಾಲ ಕೊಟ್ಟಿದ್ದೆ. ಅದನ್ನು ವಾಪಸ್ ಕೊಟ್ಟಿಲ್ಲ. ತಕ್ಷಣವೇ ವಾಪಸ್ ಕೊಡಿಸಿ. ಆ ಜಣವನ್ನು ಪ್ರಭಾಕರ್, ತನ್ನ ನಾದಿನಿ ಮನೆಯಲ್ಲಿ ಬಚ್ಚಿಟ್ಟಿದ್ದಾನೆ” ಎಂದೂ ಬರೆದಿದ್ದಾಗಿ ತಿಳಿದುಬಂದಿದೆ.
ಸಿಂಧಾರ್ ರಜಪೂತ್ ಎಂಬ ಇ-ಮೇಲ್ ಐಡಿಯಿಂದ ಮೇಲ್ ಬಂದಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಬೆದರಿಕೆ ಸಂದೇಶ ಬಂದಿರುವ ಇ-ಮೇಲ್ ಟ್ರ್ಯಾಕ್ ಮಾಡಲಾಗುತ್ತಿದೆ. ಹಲವು ಆಯಾಮಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸುತ್ತೇವೆಂದು ಪೊಲೀಸರು ಹೇಳಿದ್ದಾರೆ.