ಟೀಂ ಇಂಡಿಯಾ ಕ್ರಿಕೆಟ್ ಕೋಚ್‌ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ

Date:

Advertisements

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ಗಂಭೀರ್ ದೂರು ನೀಡಿದ್ದಾರೆ.

ಗೌತಮ್ ಗಂಭೀರ್ ಅವರು ದೆಹಲಿ ಪೊಲೀಸರನ್ನು ಸಂಪರ್ಕಿಸಿ, ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೆಯೇ ತಮ್ಮ ಕುಟುಂಬದ ಭದ್ರತೆಯನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದ್ದಾರೆ ಎಂದು ರಾಜೇಂದ್ರ ನಗರ ಠಾಣೆ ಅಧಿಕಾರಿ ತಿಳಿಸಿದ್ದಾರೆ. ಏಪ್ರಿಲ್ 22 ರಂದು ಗಂಭೀರ್‌ಗೆ ಎರಡು ಬೆದರಿಕೆ ಇಮೇಲ್‌ಗಳು ಬಂದಿದ್ದವು. ಒಂದು ಇಮೇಲ್ ಮಧ್ಯಾಹ್ನ ಮತ್ತು ಇನ್ನೊಂದು ಸಂಜೆ ಬಂದಿತ್ತು. ಎರಡೂ ಸಂದೇಶಗಳಲ್ಲೂ ಐ ಕಿಲ್ಲ್ ಯು ಎಂದು ಬರೆಯಲಾಗಿತ್ತು. ಈ ಬೆದರಿಕೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗೌತಮ್ ಗಂಭೀರ್ ದೆಹಲಿಯ ರಾಜೇಂದ್ರ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಅಂದಹಾಗೆ ಟೀಮ್ ಇಂಡಿಯಾ ಕೋಚ್​ಗೆ ಇಂತಹದೊಂದು ಕೊಲೆ ಬೆದರಿಕೆ ಸಂದೇಶಗಳು ಬರುತ್ತಿರುವುದು ಇದೇ ಮೊದಲೇನಲ್ಲ. 2021 ರಲ್ಲಿ ಬಿಜೆಪಿ ಸಂಸರಾಗಿದ್ದ ವೇಳೆ ಗಂಭೀರ್​ಗೆ ಇದೇ ರೀತಿಯ ಇಮೇಲ್ ಬಂದಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

ಇದೀಗ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ “ಐಸಿಸ್ ಕಾಶ್ಮೀರ” ಖಾತೆಯ ಹೆಸರಿನಿಂದ ಗೌತಮ್ ಗಂಭೀರ್​ಗೆ ಜೀವ ಬೆದರಿಕೆಯ ಸಂದೇಶ ಬಂದಿದೆ.

ಇದಕ್ಕೂ ಮುನ್ನ ಗೌತಮ್ ಗಂಭೀರ್ ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿಕೊಂಡಿದ್ದರು.

ಮೃತರ ಕುಟುಂಬಗಳಿಗಾಗಿ ಪ್ರಾರ್ಥಿಸುತ್ತೇನೆ. ಇದಕ್ಕೆ ಕಾರಣರಾದವರು ಬೆಲೆ ತೆರಬೇಕಾಗುತ್ತದೆ. ಇದಕ್ಕೆ ಪ್ರತೀಕಾರವಾಗಿ ಭಾರತ ತಿರುಗೇಟು ನೀಡಲಿದೆ ಎಂದು ಬರೆದುಕೊಂಡಿದ್ದರು. ಇದರ ಬೆನ್ನಲ್ಲೇ “ಐಸಿಸ್ ಕಾಶ್ಮೀರ” ಹೆಸರಿನ ಮೇಲ್ ಐಡಿಯಿಂದ ಗೌತಮ್ ಗಂಭೀರ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X