ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಕೇವಲ ಪ್ರತೀಕಾರ ಕೇಳಿದರೆ ಸಾಲದು, ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಕೇಳಬೇಕು ಎಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಮಂಗಳವಾರ, ಪಹಲ್ಗಾಮ್‌ನಲ್ಲಿ ನಡೆದ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿ 28 ಮಂದಿ ಸಾವನ್ನಪ್ಪಿದ್ದಾರೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆ ದಾಳಿ ನಡೆಸಿ, ಹತ್ಯೆಗೈದಿದೆ ಎಂದು ಹೇಳಲಾಗಿದೆ. ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕೆಂಬ ಆಗ್ರಹಗಳೂ ಕೇಳಿಬರುತ್ತಿವೆ.
ಈ ನಡುವೆ, ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, “ಪ್ರತೀಕಾರ ಕೇಳುವ ಬದಲು, ಮೊದಲು ಮೋದಿ-ಶಾ ಅವರ ರಾಜೀನಾಮೆಯನ್ನು ಕೇಳಬೇಕು. ಅವರು ಏನೆಂದು ಹಲವು ಬಾರಿ ಗೊತ್ತಾಗಿದೆ. ಚೀನಾ, ಪಾಕಿಸ್ತಾನ, ಮಾಲ್ಡೀವ್ಸ್, ಬಾಂಗ್ಲಾದೇಶಗಳ ವಿಚಾರದಲ್ಲಿ ಇಬ್ಬರೂ ಶರಣಾಗಿದ್ದಾರೆ. ಅವರು ಭಾರತ ಮಾತೆಯನ್ನು ಅವಮಾನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
Instead of asking for retaliation, ask for Modi /Shah resignation first. They have been tested many times -on China, Pakistan, Maldives , Bangladesh and both had surrendered. Bharat Mata debased.
— Subramanian Swamy (@Swamy39) April 23, 2025