ಬೀದರ್‌ | ಪಹಲ್ಗಾಮ್ ದಾಳಿ : ಭಾರತ ಕಮ್ಯೂನಿಸ್ಟ್ ಪಕ್ಷ ಖಂಡನೆ

Date:

Advertisements

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿಯ ತುರ್ತು ಸಭೆಯನ್ನು ಕರೆದು ಚರ್ಚಿಸಿದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು.

ʼಪಾಕಿಸ್ತಾನ ದೇಶವು ಭಯೋತ್ಪದಕರಿಗೆ ಬೆಂಬಲಿಸುತ್ತ, ಭಾರತದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುತ್ತಿದೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಸುಮಾರು 27 ಅಮಾಯಕ ಜನರ ಹತ್ಯೆ ಮಾಡಿರುವುದು ಖಂಡನೀಯʼ ಎಂದರು.

Advertisements

ʼಭಯೋತ್ಪಾದಕರ ಕೃತ್ಯಯನ್ನು ಲಷ್ಕರ್-ಎ-ತಯಬಾ ಉಗ್ರಗಾಮಿ ಸಂಘಟನೆಗೆ ನಿಷ್ಠೆ ಹೊಂದಿರುವ ʼದಿ ರೆಸಿಸ್ಟೆನ್ಸ್ ಫ್ರಂಟ್ʼ ಗುಂಪು ಭಯೋತ್ಪಾದಕರ ಕೃತ್ಯದ ಹೊಣೆ ಹೊತ್ತಿದೆ. ಇದರಿಂದಾಗಿ ಈ ಕೃತ್ಯದಲ್ಲಿ ಪಾಕಿಸ್ತಾನ ದೇಶ ನೇರವಾಗಿ ಭಾಗಿಯಾಗಿರುವುದು ಕಂಡು ಬಂದಿರುತ್ತದೆ. ಈ ಘಟನೆಯನ್ನು ಕೋಮು ಗಲಭೆಗೆ ಉಪಯೋಗಿಸದಂತೆ ಭಾರತ ಸರ್ಕಾರ ನಿಗಾ ವಹಿಸಬೇಕುʼ ಎಂದು ಕೋರಿದರು.

ಕೂಡಲೇ ಸಂಸದ ಸಭೆಯನ್ನು ಕರೆದು ಸರ್ವ ಸಂಸದರ ಅಭಿಪ್ರಾಯದಂತೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಏ.26ಕ್ಕೆ ಸಂವಿಧಾನ ಸಂರಕ್ಷಕರ ಸಮಾವೇಶ

ಸಿಪಿಐ ಜಿಲ್ಲಾ ಮಂಡಳಿ ಸದಸ್ಯರಾದ ಬಾಬುರಾವ ಹೊನ್ನಾ, ಪಾಂಡುರಂಗ ಪ್ಯಾಗೆ, ಪ್ರಭು ಹೊಚ್ಚಕನಳ್ಳಿ, ನಜೀರ್ ಅಹ್ಮದ್ ಚೊಂಡಿ,,ಮಹ್ಮದ್ ಖದೀರಸಾಬ್, ಪ್ರಭು ತಗಣಿಕರ್, ಖಮರ್ ಪಟೇಲ್ ರೇಕುಳಗಿ,‌ ಸುನೀಲ ವರ್ಮಾ, ಜೈಶೀಲ, ಭೀಮಣ್ಣಾ ಬಂಡೆ, ರಾಮಣ್ಣ ಅಲ್ಮಾಸಪೂರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X