ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಲು ಸಾಹಿತಿಗಳು, ಕನ್ನಡಪರ ಸಂಘಟನೆಗಳ ನಿರ್ಣಯ

Date:

Advertisements

ಕನ್ನಡ ಸಾಹಿತ್ಯ ಪರಿಷತ್ತು ಲಂಗೂ ಲಗಾಮಿಲ್ಲದೆ ಓಡುವ ಹುಚ್ಚು ಕುದುರೆಯಂತಾಗಿದೆ. ಅಲ್ಲಿ ಕೂತ ರಾಜ್ಯಾಧ್ಯಕ್ಷರು ಸಾಹಿತ್ಯ ಚಟುವಟಿಕೆ ಬಿಟ್ಟು ಆಜೀವ ಸದಸ್ಯರು ಹಾಗೂ ಅವರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೇಲೆ ಕ್ರಮ ಜರುಗಿಸುತ್ತ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸುವ ಹುಚ್ಚು ನಿರ್ಧಾರ ಕೈಗೊಂಡು; 3 ನೇ ಬಾರಿಗೆ ಬೈಲಾ ತಿದ್ದುಪಡಿಗೆ ಕೈ ಹಾಕಿದ್ದು ಭಾರಿ ಕೋಲಾಹಲ ಉಂಟು ಮಾಡಿದೆ. ತಮಗೆ ಪರಮಾಧಿಕಾರ ಬೇಕೆಂದು ಹಲವು ತಿದ್ದುಪಡಿ ಮಾಡಲು ಹೊರಟ ಜೋಶಿ ಅವರ ಈ ನಡೆಯ ವಿರುದ್ಧ ಕಾರ್ಯತಂತ್ರ ರೂಪಿಸಲು ಇಂದು ಬೆಂಗಳೂರಿನಲ್ಲಿ ಕಸಾಪ ಸಮಾನ ಮನಸ್ಕರ ಸಭೆ ನಡೆಯಿತು.

ಈ ಮಹತ್ವದ ಸಭೆಗೆ ಗಾಂಧಿ ಭವನದ ಸಭಾಂಗಣ ಕಿಕ್ಕಿರಿದು ತುಂಬಿತ್ತು. ಬೆಂಗಳೂರು, ಮಂಡ್ಯ ಜಿಲ್ಲೆಯ ಇನ್ನೂರಕ್ಕು ಹೆಚ್ವು ಸಾಹಿತಿಗಳು, ಕನ್ನಡಪರ ಹೋರಾಟಗಾರರು, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷರು ಪಾಲ್ಗೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಅಧ್ಯಕ್ಷ ಮಹೇಶ ಜೋಶಿಯವರ ಆಡಳಿತ ವೈಖರಿ, ಅವರ ಸರ್ವಾಧಿಕಾರ ಧೋರಣೆ, ಸೇಡಿನ ಕ್ರಮಗಳನ್ನು ಖಂಡಿಸಿದ್ದಲ್ಲದೆ ತತ್ ಕ್ಷಣ ಸರ್ಕಾರ ಮಧ್ಯಪ್ರವೇಶ ಮಾಡಿ, ಅಧ್ಯಕ್ಷಗಿರಿ ಅಮಾನತ್ತು ಮಾಡಿ ಆಡಳಿತಾಧಿಕಾರಿ ನೇಮಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಯವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಚಿಂತಕ ಡಾ. ಕೆ. ಮರುಳಸಿದ್ದಪ್ಪ ವಹಿಸಿದ್ದರು. ಸಾಹಿತಿಗಳಾದ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಡಾ. ಬಂಜಗೆರೆ ಜಯಪ್ರಕಾಶ್, ಡಾ. ವಸುಂಧರಾ ಭೂಪತಿ, ವಿಧಾನಪರಿಷತ್ತಿನ ಮಾಜಿ ಸದಸ್ಯ ಶ್ರೀಕಂಠೇಗೌಡ, ಮಹಿಳಾ ಹೋರಾಟಗಾರರಾದ ಕೆ ಎಸ್‌ ವಿಮಲಾ, ಸುನಂದಾ ಜಯರಾಂ, ಮೀರಾ ಶಿವಲಿಂಗಯ್ಯ, ಕನ್ನಡಪರ ಚಿಂತಕರು ಹೋರಾಟಗಾರರರಾದ ಜಾಣಗೆರೆ ವೆಂಕಟರಾಮಯ್ಯ, ಡಾ. ಜಯಪ್ರಕಾಶ ಗೌಡ, ಕೋಡಿಹೊಸಳ್ಳಿ ರಾಮಣ್ಣ, ಮಾವಳ್ಳಿ ಶಂಕರ್, ಸಿ.ಕೆ. ರಾಮೇಗೌಡ, ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ, ಬಿ ಚಂದ್ರೇಗೌಡ, ಡಾ ಬೈರಮಂಗಲ ರಾಮೇಗೌಡ, ಹನುಮೇಗೌಡ ಮೊದಲಾದವರು ಮಾತಾಡಿ, ಜೋಶಿಯ ಆಡಳಿತವನ್ನು ಕೊನೆಗಾಣಿಸಬೇಕು. ಆತನ ದುರ್ವರ್ತನೆಗೆ ತಕ್ಕ ಶಿಕ್ಷೆಯಾಗಬೇಕೆಂದು ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಗಮನಕ್ಕೆ ತರಲು ನಿರ್ಧರಿಸಲಾಯಿತು.

WhatsApp Image 2025 04 24 at 8.05.52 PM

ಮುಖ್ಯ ನಿರ್ಣಯಗಳು

Advertisements
  1. ಕಸಾಪ ಅಧ್ಯಕ್ಷರ ಆರ್ಥಿಕ ಅಶಿಸ್ತು ಹಾಗೂ ಸಮ್ಮೇಳನಗಳ ಹಣ ದುರುಪಯೋಗದ ಬಗ್ಗೆ ವಿಚಾರಣೆ ನಡೆಸಿ, ಸರ್ವಾಧಿಕಾರದ ಅಧಿಕಾರ ನಡೆಸುತ್ತಿರುವ ಅಧ್ಯಕ್ಷಗಿರಿ ಅಮಾನತ್ತಿನಲ್ಲಿಟ್ಟು, ಆಡಳಿತಾಧಿಕಾರಿ ನೇಮಿಸಬೇಕು.
  2. ಅಧ್ಯಕ್ಷರಿಗೆ ಹಿಂದಿನ ಸರ್ಕಾರ ಕೊಟ್ಟಿರುವ ಸಚಿವ ದರ್ಜೆ ಸ್ಥಾನಮಾನ ತತ್ ಕ್ಷಣ ಹಿಂಪಡೆಯಬೇಕು.
  3. ಹಿಂದೆ ಆಗಿರುವ ಎರಡು ತಿದ್ದುಪಡಿಗಳನ್ನು ರದ್ದುಪಡಿಸಬೇಕು.
  4. ಅಮಾನತ್ತು ಮಾಡಿರುವ ಕೆಲವು ಆಜೀವ ಸದಸ್ಯರ ಸದಸ್ಯತ್ವವನ್ನು ವಾಪಾಸು ಪಡೆಯಬೇಕು.
  5. ಬಳ್ಳಾರಿ ಸಾಹಿತ್ಯ ಸಮ್ಮೇಳನಕ್ಕೆ ರೂ. 40. ಕೋಟಿ ಕೇಳಲಾಗಿದ್ದು, ಅಷ್ಟು ದೊಡ್ಡ ಮೊತ್ತ ತೆರಿದಾರರ ಹಣವಾದ್ದರಿಂದ ಸರ್ಕಾರ ಈ ಹಣ ನೀಡುವುದು ಅಗತ್ಯ ಇಲ್ಲ. ಪರಿಷತ್ತೆ ಹಣ ಕ್ರೋಡೀಕರಣ ಮಾಡಿಕೊಂಡು ಸರಳವಾಗಿ ಸಮ್ಮೇಳನ ನಡೆಸಬೇಕು.
  6. ಕಸಾಪ ಅಧ್ಯಕ್ಷರ ಸರ್ವಾಧಿಕಾರ ಧೋರಣೆ ಖಂಡಿಸುವ “ಖಂಡನಾ ನಿರ್ಣಯ”ವನ್ನು ಈ ಸಭೆ ಸರ್ವಾನುಮತದಿಂದ ಪಾಸು ಮಾಡಿದೆ.

    ಈ ಸಭೆಯ ನಂತರ ರಾಜ್ಯದ ಹಲವು ಜಿಲ್ಲೆಯ ಹಲವು ಸಾಹಿತಿಗಳು, ಕನ್ನಡಪರ ಚಿಂತಕರ ಒಂದು ಸಮಿತಿ ರಚಿಸಲಾಗಿದ್ದು ಅದಕ್ಕೆ ಹಿರಿಯ ಚಿಂತಕ ಡಾ. ಮರುಳಸಿದ್ದಪ್ಪ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ಜಾಣಗೆರೆ ವೆಂಕಟರಾಮಯ್ಯ, ಆರ್ ಜಿ ಹಳ್ಳಿ ನಾಗರಾಜರನ್ನು ಸಂಚಾಲಕರನ್ನಾಗಿ ನೇಮಿಸಲಾಯಿತು. ಮುಂದಿನ ಭಾನುವಾರ ಸಮಿತಿಯ ಸಭೆ ಸೇರಿ, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X