ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ.
ಮತ್ತೊಬ್ಬ ಸ್ಥಳೀಯ ಭಯೋತ್ಪಾದಕ ಆದಿಲ್ ಥೋಕರ್ ಅಲಿಯಾಸ್ ಆದಿಲ್ ಗುರಿ ಎಂಬಾತ, ಬೈಸರನ್ ಕಣಿವೆಯಲ್ಲಿ ನಡೆದ ದಾಳಿಯನ್ನು ಕಾರ್ಯಗತಗೊಳಿಸಲು ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡಿದ ಆರೋಪವಿದೆ. ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾದ ಉಗ್ರನ ಮನೆಯನ್ನು ಭದ್ರತಾ ಪಡೆಗಳು ಬುಲ್ಡೋಜರ್ ಮೂಲಕ ನೆಲಸಮ ಮಾಡಿವೆ ಎಂದು ವರದಿಯಾಗಿದೆ.
ಪಹಲ್ಗಾಮ್‌ನಲ್ಲಿ ನಾಲ್ವರು ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಿ 28 ಮಂದಿಯನ್ನು ಹತ್ಯೆ ಮಾಡಿದ್ದರು. ಅವರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದು, ಭಾರತದ ವಿವಿಧ ರಾಜ್ಯಗಳಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಆಗಮಿಸಿದ್ದರು.
VIDEO | House of terrorist Asif Sheikh, who was allegedly involved in Pahalgam terror attack, was blown up in Jammu and Kashmir's Tral. More details awaited.
— Press Trust of India (@PTI_News) April 25, 2025
(Source: Third Party)
(Full video available on PTI Videos – https://t.co/n147TvrpG7) pic.twitter.com/KQLGoPRpgf
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾಷಾ ವೈಷಮ್ಯ ಬಿತ್ತಿದ ಭಂಡರು, ಬಿತ್ತರಿಸಿದ ಬುದ್ಧಿಗೇಡಿಗಳು
ಸೇನಾ ಮೂಲಗಳ ಪ್ರಕಾರ, ಆದಿಲ್ 2018ರಲ್ಲಿ ಅಟ್ಟಾರಿ-ವಾಘಾ ಗಡಿಯ ಮೂಲಕ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದನು. ಪಾಕಿಸ್ತಾನದಲ್ಲಿದ್ದಾಗ ಭಯೋತ್ಪಾದಕ ಶಿಬಿರದಲ್ಲಿ ತರಬೇತಿ ಪಡೆದು ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿದ್ದನು. ದಾಳಿಯಲ್ಲಿ ಭಾಗಿಯಾಗಿರುವ ಎಲ್ಲ ಭಯೋತ್ಪಾದಕರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾಗೆ ಸೇರಿದವರು ಎಂದು ಮೂಲಗಳು ಹೇಳಿವೆ.
VIDEO | Anantnag, Jammu and Kashmir: Visuals of the house of a terrorist allegedly involved in Pahalgam attack. The House was demolished overnight.#PahalgamTerroristAttack #Pahalgam
— Press Trust of India (@PTI_News) April 25, 2025
(Full video available on PTI Videos – https://t.co/n147TvrpG7) pic.twitter.com/BGq0SnfQf8