ತೀಸ್ತಾ ಸೆಟಲ್ವಾಡ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Date:

Advertisements

2002ರ ಗೋಧ್ರಾ ನಂತರದ ದಂಗೆಗಳ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತೆ, ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರಿಗೆ ಸುಪ್ರೀಂ ಕೋರ್ಟ್ ಶನಿವಾರ ರಾತ್ರಿ ನಡೆಸಿದ ವಿಶೇಷ ವಿಚಾರಣೆಯಲ್ಲಿ ಮಧ್ಯಂತರ ಜಾಮೀನು ನೀಡಿದೆ.

ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಅವರು ಜಾಮೀನು ಅರ್ಜಿಯನ್ನು ಗುಜರಾತ್ ಹೈಕೋರ್ಟಿಗೆ ಸಲ್ಲಿಸಿದ್ದರು. ಆದರೆ, ಇದನ್ನು ತಿರಸ್ಕರಿಸಿದ್ದ ಗುಜರಾತ್ ಹೈಕೋರ್ಟ್, ‘ಜಾಮೀನು ನೀಡುವುದಕ್ಕೆ ಸಾಧ್ಯವಿಲ್ಲ, ತಕ್ಷಣವೇ ಶರಣಾಗಿ’ ಎಂದು ಕೋರ್ಟ್ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಗುಜರಾತ್​ ಹೈಕೋರ್ಟ್​ ಆದೇಶ ಪ್ರಶ್ನಿಸಿ ತೀಸ್ತಾ ಸೆಟಲ್ವಾಡ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

Advertisements

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತ್ತು. ಶರಣಾಗುವ ಆದೇಶ ನೀಡುವ ಮೊದಲು ಗುಜರಾತ್ ಹೈಕೋರ್ಟ್ ಸೆಟಲ್ವಾಡ್ ಅವರಿಗೆ ಸ್ವಲ್ಪ ಸಮಯವನ್ನು ನೀಡಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು. ಆದರೆ, ಅವರಿಗೆ ಮಧ್ಯಂತರ ರಕ್ಷಣೆ ನೀಡುವ ಬಗ್ಗೆ ಒಮ್ಮತಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಮೂವರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಿತ್ತು. ಶನಿವಾರ ರಾತ್ರಿ 9.15ಕ್ಕೆ ವಿಶೇಷ ವಿಚಾರಣೆಯನ್ನು ನಡೆಸಿತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಎಎಸ್ ಬೋಪಣ್ಣ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಸದ್ಯ ಬಂಧನದಿಂದ ತೀಸ್ತಾ ಸೆಟಲ್ವಾಡ್ ಪಾರಾಗಿದ್ದಾರೆ.

ಹಿರಿಯ ವಕೀಲ ಸಿಯು ಸಿಂಗ್ ಮತ್ತು ವಕೀಲೆ ಅಪರ್ಣಾ ಭಟ್ ತೀಸ್ತಾ ಸೆಟಲ್ವಾಡ್ ಪರ ಹಾಗೂ ಗುಜರಾತ್ ಪೊಲೀಸರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು.

ಏನಿದು ಪ್ರಕರಣ?
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರ ಬಗ್ಗೆ ನಕಲಿ ಸಾಕ್ಷ್ಯ ಸೃಷ್ಟಿಸಿದ, ಪೊಲೀಸರಿಗೆ ಆಧಾರರಹಿತ ಮಾಹಿತಿ ನೀಡಿದ ಹಾಗೂ ಕ್ರಿಮಿನಲ್ ಪಿತೂರಿ ನಡೆಸಲಾಗಿದೆ ಎಂಬ ಆರೋಪದ ಮೇಲೆ ತೀಸ್ತಾ ಸೆಟಲ್ವಾಡ್ ಮತ್ತು ಸಹ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಆರ್ ಬಿ ಶ್ರೀಕುಮಾರ್ ಅವರನ್ನು 2022ರ ಜೂನ್ 25 ರಂದು ಗುಜರಾತ್ ಪೊಲೀಸ್ ಕ್ರೈಂ ಬ್ರಾಂಚ್ ಬಂಧಿಸಿತ್ತು.

ಗಲಭೆ ಸಮಯದಲ್ಲಿ ಶ್ರೀಕುಮಾರ್ ಅವರು ಪೊಲೀಸ್ ಮಹಾನಿರ್ದೇಶಕರಾಗಿದ್ದರು. ಗುಜರಾತ್ ಗಲಭೆ ಪ್ರಕರಣದಲ್ಲಿ ಆಗ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ಎಸ್​ಐಟಿ ಕಳೆದ ವರ್ಷ ಕ್ಲೀನ್​ಚಿಟ್​ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X