ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರಗಾಮಿಗಳ ದಾಳಿಗೆ ಪ್ರಾಣ ಕಳೆದುಕೊಂಡವರಿಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೇತೃತ್ವದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಮೇಣದ ಬತ್ತಿ ಬೆಳಗಿಸುವ ಮೂಲಕ ಉಗ್ರ ದಾಳಿಗೆ ಬಲಿಯಾದವರಿಗೆ ಮೌನ ನಮನ ಸಲ್ಲಿಸಿದರು.
ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಮಾತನಾಡಿ, “ಉಗ್ರಗಾಮಿಗಳು ರಾಕ್ಷಸರು, ಅವರನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಈ ವಿಷಯದಲ್ಲಿ ನಾವು ಪ್ರಧಾನಿ ಅವರೊಂದಿಗೆ ಇದ್ದೇವೆ. ಅಮಾಯಕರನ್ನು ಬಲಿಪಡೆದ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಾತನಾಡಿ, “ದುಷ್ಟ ಉಗ್ರಗಾಮಿಗಳು ಎಲ್ಲೇ ಅಡಗಿರಲಿ ಅವರನ್ನು ಕೊಚ್ಚಿ ಹಾಕಬೇಕು. ಅವರು ಮಾನವರೇ ಅಲ್ಲ” ಎಂದರು.
ಇದನ್ನೂ ಓದಿ: ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ
ಈ ವೇಳೆ ಅಲ್ಪಸಂಖ್ಯಾತ ಮುಖಂಡ ಮೊಹ್ಮದ್ ರಫೀಕ್ ಟಪಾಲ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರುಗಳು, ಜಿಲ್ಲೆಯ ಪ್ರಗತಿಪರ ಚಳುವಳಿಯ ಮುಖಂಡರುಗಳಾದ ಚೆನ್ನು ಕಟ್ಟಿಮನಿ, ಪ್ರಭುಗೌಡ ಪಾಟೀಲ, ಸಂಜು ಕಂಬಾಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.