ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಎಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಹತ್ಯೆ ನಡೆಸಿದ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಕಾರ್ಯಾಚರಣೆ ವೇಳೆ ಅಲ್ತಾಫ್ ಲಲ್ಲಿಯನ್ನು ಹತ್ಯೆ ಮಾಡಲಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.