ಇಸ್ರೋ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿ ರಂಗನ್ ಅವರು ಶುಕ್ರವಾರ ನಿಧನರಾಗಿದ್ದಾರೆ. 84 ವರ್ಷ ವಯಸ್ಸಿನ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು.
ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ವ್ಯವಸ್ಥೆ ಮಾಡಲಾಗುವುದು ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಕಸ್ತೂರಿ ರಂಗನ್ ಅವರು 2003-09ರವರೆಗೆ ರಾಜ್ಯಸಭೆಯ ಸದಸ್ಯರಾಗಿದ್ದರು. ಹಾಗೆಯೇ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ.
— Siddaramaiah (@siddaramaiah) April 25, 2025
ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು.
ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ… pic.twitter.com/BI50EnYZxW
ಭಾರತದ ಹೆಮ್ಮೆಯ ಪುತ್ರ, ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ @isro ವಿಶ್ರಾಂತ ಅಧ್ಯಕ್ಷರು, ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಕರಡು ಸಮಿತಿ ಅಧ್ಯಕ್ಷರೂ ಆಗಿದ್ದ ಪದ್ಮವಿಭೂಷಣ ಡಾ. ಕಸ್ತೂರಿ ರಂಗನ್ ಅವರ ನಿಧನದ ವಾರ್ತೆ ಕೇಳಿ ನನಗೆ ಅತೀವ ದುಃಖ ಉಂಟಾಯಿತು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 25, 2025
ಅವರ ಜತೆ ನನಗೆ ಆತ್ಮೀಯ ಬಾಂಧವ್ಯವಿತ್ತು. ಎರಡು… pic.twitter.com/VekfNX7Gyw
ಕಸ್ತೂರಿ ರಂಗನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
