ಬಾಗಲಕೋಟೆ | ಅನುಭವ ಮಂಟಪದ ಸ್ಮರಣೆಯಲ್ಲಿ ಶರಣರ ರಥ; ಶಾಸಕರಿಂದ ವಚನ ಮೆರವಣಿಗೆ

Date:

Advertisements

ಬಾಗಲಕೋಟೆ ಜಿಲ್ಲೆಯ ಇಳಕಲ್‌ ನಗರವು ಗುರುವಾರ (ಏ.24) ರಾತ್ರಿ ಶರಣ ಸಂಸ್ಕೃತಿಯ ವೈಭವಕ್ಕೆ ಸಾಕ್ಷಿಯಾಯಿತು. ಜಗತ್ತಿನ ಮೊದಲ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪದ ಪರಿಕಲ್ಪನೆಯನ್ನು ಪ್ರತಿಬಿಂಬಿಸುವ ಬಸವಾದಿ ಶರಣರ ವೈಭವ ರಥಯಾತ್ರೆ, ಭಕ್ತಿಭಾವಪೂರ್ಣ ಸ್ವಾಗತದೊಂದಿಗೆ ನಗರಕ್ಕೆ ಆಗಮಿಸಿತು.

ಶರಣರ ತಾತ್ವಿಕ ಪರಂಪರೆಯನ್ನು ಸಾರುವ ಈ ಯಾತ್ರೆಗೆ ಶುಕ್ರವಾರ ಬೆಳಗ್ಗೆ ಇಳಕಲ್ ಶ್ರೀಮಠದ ಗುರುಮಹಾಂತ ಸ್ವಾಮೀಜಿಗಳು ಹಾಗೂ ಹುನಗುಂದ ಶಾಸಕ ವಿಜಯಾನಂದ್ ಎಸ್. ಕಾಶಪ್ಪನವರ ಚಾಲನೆ ನೀಡಿದ್ದು, ಶಾಸಕರು ಬಸವವಚನ ಕಟ್ಟು ಹೊತ್ತು ಮೆರವಣಿಗೆಯಲ್ಲಿ ಸಾಗಿ ಗಮನ ಸೆಳೆದರು.

WhatsApp Image 2025 04 25 at 2.48.11 PM 1

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಥಯಾತ್ರೆಗೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಲಾಯಿತು. ಅನೇಕ ಸಂಘಟನೆಗಳು, ಭಕ್ತರು ಮತ್ತು ವಿದ್ಯಾರ್ಥಿಗಳು ಈ ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

Advertisements

ಈ ರಥಯಾತ್ರೆಯನ್ನು ಏ.29 ಮತ್ತು 30ರಂದು ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ನಡೆಯಲಿರುವ “ಅನುಭವ ಮಂಟಪ – ಬಸವಾದಿ ಶರಣ ವೈಭವ” ಎಂಬ ರಾಜ್ಯಮಟ್ಟದ ಎರಡು ದಿನಗಳ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದೆ. ಇಳಕಲ್ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ, ರಥವು ಹುನಗುಂದ ನಗರದತ್ತ ಪಯಣಿಸಿತು.

ಇದನ್ನೂ ಓದಿ: ಬಾಗಲಕೋಟೆ | ಸಾಹಿತಿಗಳು ಸ್ವಾವಲಂಬಿಗಳಾಗಬೇಕು: ಶ್ರೀಧರ ಬಳಿಗಾರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X