ಮುಂಬೈನಲ್ಲಿ ಲೋಕಲ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಎಂದು ಜೂ.17ರಂದು ನಡೆದಿದೆ.
ಘಟನೆ ನಡೆದು ಎರಡು ವಾರಗಳ ನಂತರ ಘಟನೆಯ ಸಿಸಿಟಿವಿ ದೃಶ್ಯಾವಳಿಯು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ರೈಲ್ವೆ ಅಧಿಕಾರಿಗಳು, ಮುಂಬೈನ ಮಲಾಡ್ ನಿಲ್ದಾಣದಲ್ಲಿ ಜೂ.17ರಂದು ಈ ಘಟನೆ ನಡೆದಿದೆ. ಪ್ಲಾಟ್‌ಫಾರಂ 3ರ ಅಂಚಿನಲ್ಲಿ ನಿಂತು ರೈಲ್ವೆ ಹಳಿಯ ಕಡೆಗೆ ಕೈ ತೊಳೆಯುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿದೆ. ಕೂಡಲೇ ಅವರನ್ನು ಕಂಡಿವಲಿಯ ಶತಾಬ್ದಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಅವರು ಮೃತಪಟ್ಟಿರುವುದಾಗಿ ಎಂದು ವೈದ್ಯರು ಘೋಷಿಸಿದರು. ಮೃತಪಟ್ಟ ಬಾಲಕನನ್ನು ಮಯಾಂಕ್ ಶರ್ಮಾ ಎಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಮಾಜಿ ಸಚಿವ ಸುಧಾಕರ್
ಮೃತಪಟ್ಟ ಯುವಕನ ಸಮೀಪದಲ್ಲಿ ನಿಂತಿದ್ದ ಅವನ ಸ್ನೇಹಿತನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ದೃಶ್ಯಾವಳಿಯು ನಿಲ್ದಾಣದಲ್ಲಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಭಯಾನಕವಾಗಿದೆ.