ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ನಿಷೇಧಿತ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಜುಲೈ 1 ರಂದು ಸಿಸಿಬಿ ದಾಳಿ ನಡೆಸಿದೆ.
ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ ಅವರಿಂದ ಒಟ್ಟು ₹5 ಲಕ್ಷ ಮೌಲ್ಯದ ಇ-ಸಿಗರೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಸಮೀಪದಲ್ಲಿರುವ ಹೊಗೆಸೊಪ್ಪಿನ ಅಂಗಡಿಗೆ ಅಧಿಕಾರಿಗಳ ತಂಡ ತೆರಳಿ, ಆರೋಪಿಗಳು ನಿಷೇಧಿತ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದೆ. ಆರೋಪಿಗಳು ವಿದೇಶದಿಂದ ನಿಷೇಧಿತ ವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂಗಡಿಯನ್ನು ಸೀಲ್ ಮಾಡಲಾಗಿದೆ.