ಮಹಿಳೆ, ಶೂದ್ರರನ್ನು ಶಿಕ್ಷಣದಿಂದ ದೂರವಿರಿಸಿದ್ದ ಚಾತುರ್ವರ್ಣ ವ್ಯವಸ್ಥೆ : ಸಿಎಂ ಸಿದ್ದರಾಮಯ್ಯ

Date:

Advertisements
  • ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ
  • ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು : ಸಿಎಂ

ಚಾತುರ್ವರ್ಣ ವ್ಯವಸ್ಥೆಯ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು‌ ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಫ.ಗು.ಹಳಕಟ್ಟಿ ಫೌಂಡೇಶನ್ ಹಮ್ಮಿಕೊಂಡಿದ್ದ ‘ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಅತ್ಯಂತ ಕೆಳ ಜಾತಿಯಲ್ಲಿ ಜನಿಸಿ ಅತ್ಯುನ್ನತ ಎತ್ತರಕ್ಕೆ ಏರಿದ ಅಲ್ಲಮಪ್ರಭುರನ್ನು ಅನುಭವ ಮಂಟಪದ ಮುಖ್ಯಸ್ಥರನ್ನಾಗಿಸಿದ್ದು ಬಸವಣ್ಣನವರು. ಈ ಅನುಭವ ಮಂಟಪದ ಆಶಯವನ್ನು, ವಚನಗಳ ಮಹತ್ವವನ್ನು ಮುಂದಿನ ತಲೆಮಾರುಗಳಿಗೆ ದಾಟಿಸಿದವರಲ್ಲಿ ಫ.ಗು.ಹಳಕಟ್ಟಿಯವರು ಪ್ರಮುಖರು ಎಂದು ಸಿಎಂ ಹೇಳಿದರು.

Advertisements

ಚಾತುರ್ವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ, ಸಂಪತ್ತಿನಿಂದ ಶೂದ್ರ ಸಮುದಾಯ ವಂಚಿತವಾಗಿತ್ತು. ಅದಕ್ಕೇ ಕಾಯಕ ಮತ್ತು ದಾಸೋಹ ಸಂಸ್ಕಾರದ ಮೂಲಕ ಸರ್ವರಿಗೂ ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಪಾಲು ಸಿಗುವಂತೆ ಮಾಡಿದ್ದು ಬಸವಣ್ಣನವರು. ಮುಖ್ಯಮಂತ್ರಿ ಆಗಿ ಇದೇ ಕಾಯಕ ಮತ್ತು ದಾಸೋಹ ಸಂಸ್ಕೃತಿಯನ್ನು ಪಾಲಿಸುತ್ತಿದ್ದೇನೆ ಎಂದರು.

ಪ್ರಶಸ್ತಿ ಪುರಸ್ಕೃತರಾದ ವಚನ ಕ್ಷೇತ್ರದಲ್ಲಿ ಮಹತ್ವದ ಮೌಲ್ಯಯುತ ಸಾಹಿತ್ಯಿಕ ಕೆಲಸ ಮಾಡಿರುವ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ, ಸಮಾಜ ಸೇವಕಿ ಶ್ರೀಮತಿ ಎಸ್.ಜಿ.ಸುಶೀಲಮ್ಮ ಅವರನ್ನು ಸನ್ಮಾನಿಸಲಾಯಿತು.

ಬೇಲಿಮಠದ ಶ್ರೀಶ್ರೀ ಶಿವರುದ್ರ ಮಹಾಸ್ವಾಮಿಗಳ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಹಿಸಿದ್ದರು. ಶ್ರೀಮತಿ ಶೀಲಾ ಹಳಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪವಿತ್ರ ಹಳಕಟ್ಟಿ ಸೇರಿ ಹಲವು ಗಣ್ಯರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X