ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಪ್ರಧಾನಿಯಿಂದ ಅಧಿಕಾರ ದುರ್ಬಳಕೆ: ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ

Date:

Advertisements

ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡಿರುವ ಪ್ರಧಾನಿ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನು ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರ ಬರೆದಿರುವ ಅವರು ಪ್ರಧಾನಿ ಸರ್ಕಾರಿ ಆಡಳಿತ ಯಂತ್ರ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಆಕ್ಷೇಪಿಸಿದ್ದಾರೆ.‌

ಸಿಕಲ್ ಸೆಲ್ ರಕ್ತಹೀನ ನಿವಾರಣೆ ಮಿಷೆನ್‌ಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮವನ್ನು ಪ್ರಧಾನಿ ಮೋದಿಯವರು ವಿಪಕ್ಷಗಳನ್ನ ಹಳಿಯಲು ಬಳಸಿಕೊಂಡರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವರ್ಚುವಲ್ ಮೂಲಕ ಕಾರ್ಯಕ್ರಮಕ್ಕೆ ಪ್ರಧಾನಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿಲಿದ್ದು, ರಾಜ್ಯದ ಆರೋಗ್ಯ ಸಚಿವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ನಮಗೆ ಆಹ್ವಾನಿಸಿತ್ತು. ರಾಜ್ಯದ ಆರೋಗ್ಯ ಸಚಿವನಾಗಿ ನಾನು ವಿಕಾಸ ಸೌಧದಿಂದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದೆ. ಆದರೆ ಮೋದಿಯವರು ಯಾರೊಂದಿಗೂ ಚರ್ಚಿಸಿದೆ ವಿಪಕ್ಷಗಳನ್ನ ದೂಷಿಸುವ ಭಾಷಣ ಮಾಡಿದರು.

Advertisements

ಸಿಕಲ್ ಸೆಲ್ ರಕ್ತಹೀನ ಕಾಯಿಲೆ ನಿವಾರಣೆ ಕುರಿತು ಪ್ರಧಾನಿ ಮೋದಿಯವರು ಈಗ ಮಾತಾಡುತ್ತಿದ್ದಾರೆ. ಆದರೆ ಸಿಕಲ್ ಸೆಲ್ ನಿವಾರಣೆ ಕುರಿತು ದೇಶದಲ್ಲೇ ಮೊದಲು ಜಾಗೃತಗೊಂಡಿದ್ದ ರಾಜ್ಯ ಕರ್ನಾಟಕ. 2016 ರಿಂದಲೇ ಕರ್ನಾಟಕ ಸರ್ಕಾರ ಸಿಕಲ್ ಸೆಲ್ ಕಾಯಿಲೆ ವಿರುದ್ಧ ಕಾರ್ಯಕ್ರಮಗಳನ್ನ ಹಾಕಿಕೊಂಡು ಬಂದಿದೆ. 2016 ರಲ್ಲಿ ರಾಜ್ಯದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೈಸೂರು ಭಾಗದ ಬುಡಕಟ್ಟು ಜನರ ತಪಾಸಣೆ ನಡೆಸಿ ಪಾಸಿಟಿವ್ ಬಂದವರಿಗೆ ಉಚಿತ ಆರೋಗ್ಯ ಚಿಕಿತ್ಸೆ ನೀಡುತ್ತಿದೆ.

ಸಿಕಲ್ ಸೆಲ್ ಕಾಯಿಲೆಯನ್ನ ಕರ್ನಾಟಕ ರಾಜ್ಯ ತಡೆಗಟ್ಟುತ್ತಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರದ ಅಭಿಪ್ರಾಯ ಕೇಳುತ್ತಾರೆ ಎಂಬ ನಿರೀಕ್ಷೆಯಲ್ಲಿ ರಾಜ್ಯದ ಆರೋಗ್ಯ ಸಚಿವನಾಗಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಆದರೆ ಪ್ರಧಾನಿ ಅವರು ತಮ್ಮ ಪಕ್ಷದ ಚುನಾವಣಾ ಭಾಷಣಕ್ಕೆ ನಮ್ಮ ಸಮಯ ವ್ಯರ್ಥಮಾಡಿದರು. ಮೋದಿಯವರು ಎಲ್ಲರಿಗೂ ನಿರಾಶೆ ಉಂಟುಮಾಡಿದರು ಎಂದು ಪತ್ರದಲ್ಲಿ ಗುಂಡೂರಾವ್ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶರದ್‌ ಪವಾರ್‌ಗೆ ಕೈಕೊಟ್ಟು ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿದ ಅಜಿತ್‌ ಪವಾರ್

ಪ್ರಧಾನಿ ಮೋದಿಯವರು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಲು ಈ ರೀತಿಯ ಸರ್ಕಾರಿ ಕಾರ್ಯಕ್ರಮಗಳು ಬಳಕೆಯಾಗುವುದು ಸರಿಯಲ್ಲ. ಪ್ರಧಾನಿ ಮೋದಿಯವರು ವಿಪಕ್ಷಗಳ ಬಗ್ಗೆ ತಮಗಿರುವ ಪೂರ್ವಾಗ್ರಹಗಳನ್ನು ಮುಂದಿಡಲು ಸರ್ಕಾರದ ಅಧಿಕೃತ ಕಾರ್ಯಚಟುವಟಿಕೆಯನ್ನು ಆರಿಸಿಕೊಂಡಿರುವುದು ಆಕ್ಷೇಪಾರ್ಹವಾಗಿದೆ ಎಂದು ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜನಸಾಮಾನ್ಯರಿಗೆ ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗಳನ್ನು ಪ್ರಧಾನಿ ಮೋದಿಯವರು ಮೋಸ ಎಂದು ಕರೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಗ್ಯಾರಂಟಿಗಳು ಒಂದೊಂದಾಗಿ ಜಾರಿಗೆ ಬರುತ್ತಿವೆ. ಇದರಿಂದ ಜನಸಾಮಾನ್ಯರಿಗೆ ಆರ್ಥಿಕವಾಗಿ ಅನೂಲಕ ಆಗಿದೆ. ಬೆಲೆ ಏರಿಕೆಯ ಬಿಸಿಯಿಂದ ರಿಲೀಫ್ ಸಿಕ್ಕಿದೆ. ಆದರೆ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ವಿರುದ್ಧ ಸರ್ಕಾರಿ ಕಾರ್ಯಕ್ರಮಲ್ಲಿ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರತಿಯೊಬ್ಬ ನಾಗರಿಕನೂ ತನ್ನ ರಾಜಕೀಯ ಅಭಿಪ್ರಾಯಗಳನ್ನು ರಾಜಕೀಯ ವೇದಿಕೆಗಳಲ್ಲಿ ವ್ಯಕ್ತಪಡಿಸಲು ಮುಕ್ತನಾಗಿದ್ದಾನೆ. ಆದರೆ ರಾಜಕೀಯ ಪೂರ್ವಗ್ರಹಗಳು ಸರ್ಕಾರದ ಸಮಾರಂಭದಲ್ಲಿ ಪ್ರಧಾನಿಯೊಬ್ಬರು ವ್ಯಕ್ತಪಡಿಸುವುದು ಅಕ್ಷಮ್ಯ.

“ರಾಷ್ಟ್ರೀಯ ಸಿಕಲ್ ಸೆಲ್ ಅನೀಮಿಯಾ ಎಲಿಮಿನೇಷನ್ ಮಿಷನ್” ನ ಪ್ರಾರಂಭವು ಪೀಡಿತ ಜನರು ಮತ್ತು ಮಿಷನ್ ಕಾರ್ಯತಂತ್ರದ ಬಗ್ಗೆ ಆಗಿರಬೇಕಾಗಿತ್ತು. ಆದರೆ ಪ್ರಧಾನಿಯವರು ಬುಡಕಟ್ಟು ಜನಾಂಗದ ಸಮಸ್ಯೆಗಳ ಬಗ್ಗೆ ಗಮನಹರಿಸಲಿಲ್ಲ. ಬದಲಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುವಲ್ಲಿ ಈ ಸಂದರ್ಭವನ್ನು ಮೋದಿಯವರು ವ್ಯರ್ಥ ಮಾಡಿದರು.

ಬುಡಕಟ್ಟು ಪ್ರದೇಶಗಳು ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವಾಗ, ಆದಿವಾಸಿಗಳಿಗೆ ಸಂಬಂಧಿಸಿದ ಘಟನೆಗಳ ಬಗ್ಗೆ ಪ್ರಧಾನಿ ಸಂಪೂರ್ಣ ಮೌನ ವಹಿಸಿದ್ದರು.

ಆರೋಗ್ಯ ಸೇವೆಗಳಲ್ಲಿ ಕರ್ನಾಟಕದ ಸಾಧನೆ ಮತ್ತು ಸಿಕಲ್ ಸೆಲ್ ಕಾಯಿಲೆಯ ವಿರುದ್ಧ ಹೋರಾಡಲು ರಾಜ್ಯದ ಐತಿಹಾಸಿಕ ಪ್ರಯತ್ನಗಳನ್ನ ಪ್ರಧಾನಿ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2024 ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ರಾಜಕೀಯ ಭಾಷಣಗಳಿಗೆ ಸರ್ಕಾರದ ಆಡಳಿತಯಂತ್ರ ಬಳಕೆಗೆ ಅವಕಾಶ ನೀಡಬಾರದು ಎಂದು ಸಚಿವರು ರಾಷ್ಟ್ರಪತಿ ಮುರ್ಮು ಅವರಿಗೆ ಪತ್ರದ ಮುಖೇನ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X