ಭಾರತವನ್ನು ಕೆಣಕಿದರೆ ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ದೇವನಹಳ್ಳಿ ಶಾಂತಿ ಭೋಧಿಸಿದ ಬುದ್ಧ, ಬಸವರ ನಾಡು ನಮ್ಮದು. ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧವಾಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‌ನಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದರು.

“ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದರು.

Advertisements

“ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡವೆಂದು ಹೇಳಿದ್ದೇನೆಂದು ಬಿಜೆಪಿ ಸುಳ್ಳು ಸುಳ್ಳೇ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡವೆಂದು ಹೇಳಿದ್ದೇನೆಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ” ಎಂದು ತಿರುಗೇಟು ನೀಡಿದರು.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣವಿಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಶತ್ರುವನ್ನು ಮಣಿಸಲು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು: ಸಿದ್ದರಾಮಯ್ಯ ತಮ್ಮ ಮಾತಿಗೆ ಸ್ಪಷ್ಟನೆ

“ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ” ಎಂದು ಹೇಳಿದರು.

“ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಹಾಗೂ ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್‌ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ ₹80,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ” ಎಂದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X