ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಶುರುವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
50 ವರ್ಷದ ಪರಶುರಾಮ ಗಾಣಿಗೇರ ಹತ್ಯೆಯಾದ ವ್ಯಕ್ತಿಯೆಂದು ಹೇಳಲಾಗಿದ್ದು, ದ್ಯಾಮಣ್ಣ ಬಡಿಗೇರ ಹತ್ಯೆಗೈದ ಆರೋಪಿ ಎನ್ನಲಾಗಿದೆ. ಇಬ್ಬರ ನಡುವೆ ಮನೆಯ ಪಕ್ಕದ ಜಾಗದ ವಿಚಾರದಲ್ಲಿ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ, ದ್ಯಾಮಣ್ಣ ಹರಿತ ವಸ್ತುವಿನಿಂದ ಹಲ್ಲೆಗೈದು ಪರಾರಿಯಾಗಿದ್ದಾನೆ. ಕೂಡಲೇ ಜಿಲ್ಪಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಪರಶುರಾಮ ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | ಏ. 30 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ
ಈ ಕುರಿತು ಮೃತನ ಮಗಳ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪರಶುರಾಮ ಗಾಣಿಗೇರ ಮತ್ತು ದ್ಯಾಮಣ್ಣ ಬಡಿಗೇರ ಅಕ್ಕಪಕ್ಕದ ಮನೆಯವರಾಗಿದ್ದು, ಮನೆ ಕಟ್ಟುವ ಸಂಬಂಧ ಗೋಡೆಯ ವಿಚಾರವಾಗಿ ಆಗಾಗ್ಗೆ ಜಗಳವಾಗುತ್ತಿತ್ತು. ಶನಿವಾರ ಇದೇ ವಿಷಯಕ್ಕೆ ಜಗಳ ಆಗಿ ಕೊಲೆ ನಡೆದಿದೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಬ್ಯಾಕೋಡ್ ತಿಳಿಸಿದ್ದಾರೆ.