ಅಮವಾಸ್ಯೆ ಹಿನ್ನಲೆಯಲ್ಲಿ ಜಮೀನಿನಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮಗ ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ ಗುಡದಿನ್ನಿ ಗ್ರಾಮದಲ್ಲಿ ನಡೆದಿದೆ.
ಸಾಯಣ್ಣ (55) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರ ತಾಯಿ ಲಕ್ಷ್ಮಮ್ಮ (70) ಗಂಭೀರ ಗಾಯಗೊಂಡಿದ್ದು, ಅವರನ್ನು ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಸಕಿ ಪುತ್ರನಿಂದ ಟೋಲ್‌ಗೇಟ್ ಧ್ವಂಸ: ಶ್ರೀದೇವಿ ನಾಯಕ ಖಂಡನೆ
ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
