ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ ಪಾಟೀಲ್, ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಇತರರು ಈ ವೇಳೆ ಇದ್ದರು.