ರೈಲ್ವೆ ಪರೀಕ್ಷೆ | ಮಂಗಳಸೂತ್ರ-ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿವಕುಮಾರ್ ಆಗ್ರಹ

Date:

Advertisements

ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಈ ಹಿಂದೆ ಸಣ್ಣ, ಸಣ್ಣ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸೆದ ಉದಾಹರಣೆಗಳನ್ನು ನೋಡಿದ್ದೇವೆ. ಇದರ ವಿರುದ್ಧ ಜನರೇ ಆಕ್ರೋಶ ವ್ಯಕ್ತಪಡಿಸಬೇಕು” ಎಂದರು.

ಬೆಲೆ ಏರಿಕೆಗೆ ಕೇಂದ್ರವೇ ಕಾರಣ

Advertisements

“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ” ಎಂದು ಹೇಳಿದರು.

“ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X