ಕಾಶ್ಮೀರದಲ್ಲಿ ಭಯೋತ್ಪಾದಕರು ಹತ್ಯೆ ಮಾಡಿದಾಗ ಒಬ್ಬ ಪೊಲೀಸ್ ಅಲ್ಲಿರಲಿಲ್ಲ. ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ. ಲೋಪ ಮರೆಮಾಚಲು ನನ್ನ ಹೇಳಿಕೆ ತಿರುಚುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಮತ್ತು ಸಂವಿಧಾನ ರಕ್ಷಿಸಿ ದೇಶ ಉಳಿಸಿ ಆಂದೋಲನದ ಅಂಗವಾಗಿ ಎಪಿಸಿಸಿ, ಕೆಪಿಸಿಸಿ ವತಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ. ಅನಿವಾರ್ಯ ಪರಿಸ್ಥಿತಿ ಬಂದರೆ ಯುದ್ಧ ಮಾಡಲೇಬೇಕಾಗುತ್ತದೆ. ಆದರೆ ಕೇಂದ್ರ ಸರ್ಕಾರದವರು ಭಯೋತ್ಪಾದಕರನ್ನು ಮಟ್ಟ ಹಾಕಿಲ್ಲ ದೇಶದ ಅಖಂಡತೆ, ಸಾರ್ವಭೌಮತೆಗೆ ಧಕ್ಕೆ ಬಂದರೆ ಎದುರಿಸಲು ಸಿದ್ಧರಿದ್ದೇವೆ’ ಎಂದರು.