ಜನತೆಯ ಹೊರೆ ಇಳಿಸಿರಿ ಎಂಬ ಘೋಷಣೆಯೊಂದಿಗೆ ವಿಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ಏಪ್ರಿಲ್ 18 ರಿಂದ 28 ರವರೆಗೆ ರಾಜ್ಯಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು ಇದರ ಅಂಗವಾಗಿ ವಿಮೆನ್ ಇಂಡಿಯಾ ಮೂಮೆಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಮಣಿಪಾಲದಲ್ಲಿರುವ ಡಿಸಿ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಸದಸ್ಯೆಯಾಗಿರುವ ನಸೀಮಾ ಮಾತನಾಡಿ ಕೇಂದ್ರ ಸರಕಾರ ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ಏರಿಸಿದರೆ ರಾಜ್ಯ ಸರ್ಕಾರ ಹಾಲು, ನೀರು ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದು ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನಾ ಅಭಿಯಾನವನ್ನು ನಡೆಸುವ ಮೂಲಕ ಬೆಲೆಯೇರಿಕೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದರು.
ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷರಾಗಿರುವ ನಾಝಿಯ ನಸ್ರುಲ್ಲ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಉಪಾಧ್ಯಕ್ಷೆ ನಸೀಮಾ ಫಾತಿಮಾ ವಂದಿಸಿದರು.