ಮಂಗಳೂರು | ವಲಸೆ ಕಾರ್ಮಿಕನ ಹತ್ಯೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಗುಂಡೂರಾವ್

Date:

Advertisements

ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಹತ್ಯೆಯಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನ ಕಲ್ಲಿನಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಕ್ರಿಕೆಟ್ ಆಟ ಆಡುವ ವೇಳೆ ಆಟಗಾರರ ಗುಂಪು ಹಾಗೂ ಅನ್ಯ ಕೋಮಿನ ಯುವಕನ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದು, ಯುವಕನ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

“ಈ ರೀತಿಯ ಘಟನೆಗಳು ಕೋಮು ವೈಷಮ್ಯವನ್ನ ಬೀರುತ್ತವೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ನಾನು ಸೂಚನೆ ನೀಡಿದ್ದೇನೆ. ಈಗಾಗಲೇ ಪ್ರಕರಣ ಕುರಿತು ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸೂಕ್ತ ತನಿಖೆ ನಡೆಸಲಾಗುತ್ತಿದೆ” ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

Advertisements

“ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಕೋಮುಸೌಹಾರ್ದತೆ ಹಾಗೂ ಶಾಂತಿ ಕಾಪಾಡುವಂತೆ ನಾನು ಮನವಿ ಮಾಡುತ್ತೇನೆ” ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X