ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಬಳಿಕ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್, “ಮಂಗಳೂರು ಅಪರಿಚಿತ ಯುವಕನ ಗುಂಪು ಹತ್ಯೆಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕಾರಣ” ಎಂದು ಹೇಳಿಕೆ ನೀಡಿದ್ದಾರೆ.
ಮಂಗಳೂರಿನ ಘಟನೆಯ ಬಗ್ಗೆ ಬೆಂಗಳೂರಿನಲ್ಲಿ ಇಂಗ್ಲಿಷ್ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಈ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಿಲ್ಲ. ಆದರೆ, ಈ ಮಾಹಿತಿಯನ್ನು ಗೃಹ ಸಚಿವರಿಗೆ ನೀಡಿದ್ದು ಯಾರು ಎಂಬ ಪ್ರಶ್ನೆಯನ್ನು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಗೃಹ ಸಚಿವ ಜಿ. ಪರಮೇಶ್ವರ್, “ಅಪರಿಚಿತ ವ್ಯಕ್ತಿಯೊಬ್ಬನ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಸ್ಥಳೀಯ ಕ್ರಿಕೆಟ್ ಪಂದ್ಯದ ವೇಳೆ ಅವರು ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗುತ್ತಿದ್ದರು. ಇದರಿಂದಾಗಿ ಅಲ್ಲಿದ್ದ ಕೆಲವರು ಅವರನ್ನು ಥಳಿಸಿದ್ದಾರೆ ಎಂದು ನನಗೆ ಬಂದಿರುವ ವರದಿ. ಒಂದು ವೇಳೆ ಅಪರಿಚಿತ ಯುವಕ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಿದ್ದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬಹುದಿತ್ತು. ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಂಡು ಹಲ್ಲೆ ನಡೆಸಬಾರದಿತ್ತು. ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರಿಗೂ ಇಲ್ಲ” ಎಂದು ಹೇಳಿಕೆ ನೀಡಿದ್ದಾರೆ.
VIDEO | Bengaluru: Karnataka Home Minister G Parameshwara on Mangaluru mob lynching incident says, “An incident of mob lynching has been reported involving an unidentified individual. I was informed that there are reports he was shouting ‘Pakistan Zindabad’ during a local cricket… pic.twitter.com/dpLHTrujDf
— Press Trust of India (@PTI_News) April 29, 2025
“ಸಂತ್ರಸ್ತ ಯುವಕ ಸ್ಥಳದಲ್ಲಿ ಸತ್ತಿರಲಿಲ್ಲ. ನಂತರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟಿರುವ ಯುವಕನ ವಿವರವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ” ಎಂದಿರುವ ಗೃಹ ಸಚಿವರು, “ಹೆಚ್ಚಿನ ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
“ನನಗೆ ಇನ್ನೂ ಪೂರ್ಣ ವರದಿ ಬಂದಿಲ್ಲ. ಸುಮಾರು 10 ರಿಂದ 12 ಜನರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಹೇಳಿರುವುದೇನು?
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮಂಗಳೂರು ವಲಸೆ ಕಾರ್ಮಿಕನ ಹತ್ಯೆ: 25ರಿಂದ 30 ಜನರ ಗುಂಪು ಹಲ್ಲೆ ನಡೆಸಿ ಕೃತ್ಯ; ಪೊಲೀಸ್ ಕಮಿಷನರ್
ಮಂಗಳವಾರ ಮಧ್ಯಾಹ್ನ ತಮ್ಮ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಚಿನ್ ಟಿ(26), ದೇವದಾಸ್(50), ಮಂಜುನಾಥ್ (32), ಸಾಯಿದೀಪ್(29), ನಿತೇಶ್ ಕುಮಾರ್(33), ದೀಕ್ಷಿತ್ ಕುಮಾರ್ (32), ಸಂದೀಪ್ (23), ವಿವಿಯನ್ ಆಳ್ವಾರೀಸ್(41), ಶ್ರೀದತ್ತ(32), ರಾಹುಲ್ ( 23), ಪ್ರದೀಪ್ ಕುಮಾರ್ (35), ಮನೀಷ್ ಶೆಟ್ಟಿ(21), ಧನುಷ್(31), ದೀಕ್ಷಿತ್ (27) ಹಾಗೂ ಕಿಶೋರ್ ಕುಮಾರ್ (37) ಎಂದು ಗುರುತಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
Evaru central home ministeravra thamma, pak zindbad koogidare kollabahuda, enthaha madyapani home minister, nalayak. Evanannu kelagilisy home minister hudde enda. Congee Govt. yenu madalla, specially muslimarige,