ಒಂದು ರೂಪಾಯಿ ಲಂಚವಿಲ್ಲದೇ ಗ್ರಾಮ ಆಡಳಿತಾಧಿಕಾರಿಗಳ ನೇಮಕ: ಸಿಎಂ ಸಿದ್ದರಾಮಯ್ಯ

Date:

Advertisements

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

“ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು. ಪ್ರಸ್ತುತ ಆರು ಲಕ್ಷ ಅರ್ಜಿಗಳಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು ಆಯ್ಕೆಯಾಗಿದ್ದು, ಆಯ್ಕೆಯಾಗಿರುವವರು ಪುಣ್ಯವಂತರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿದ್ದೀರಿ. 9834 ಒಟ್ಟು ಗ್ರಾಮ ಆಡಳಿತಾಧಿಕಾಗಳಿದ್ದು, ಅದರಲ್ಲಿ 8003 ಜನ ಕಾರ್ಯನಿರ್ವಹಿಸುತ್ತಿದ್ದಾರೆ.ಈಗ 1000 ಜನ ಸೇರ್ಪಡೆಯಾಗುತ್ತಿದ್ದಾರೆ. ಯಾವುದೇ ಗ್ರಾಮ ಆಡಳಿತಾಧಿಕಾರಿಯ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ” ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Advertisements

ದಾಖಲೆಗಳನ್ನು ಕರಾರುವಾಕ್ಕಾಗಿಡುವುದು ಅವಶ್ಯಕ

“ನಮ್ಮ ದೇಶ ಗ್ರಾಮಗಳ ದೇಶ. ಕೃಷಿ ಪ್ರಮುಖವಾದ ಉದ್ಯೋಗವಾಗಿದ್ದು, ಹೆಚ್ಚು ಶೇ 60 ಕ್ಕೂ ಹೆಚ್ಚು ಜನ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಜಮೀನುಗಳ ಲೆಕ್ಕ ಇಡುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ. ಹಳ್ಳಿಗಳಲ್ಲಿ ಶಾಂತಿ, ನೆಮ್ಮದಿ ನೆಲೆಸಲು ದಾಖಲಾತಿಗಳು ಸರಿಯಾಗಿರಬೇಕು. ದಾಖಲೆಗಳನ್ನು ಬಹಳ ಕರಾರುವಾಕ್ಕಾಗಿ ಇಡುವುದು ಅವಶ್ಯಕ. ಆಧುನಿಕ ನಾಡಿನಲ್ಲಿ ತಂತ್ರಜ್ಞಾನ, ವಿಜ್ಞಾನ ಬೆಳೆದಿದೆ. ಈಗ ಪ್ರತಿಯೊಂದೂ ಡಿಜಿಟಲೀಕರಣವಾಗಿದೆ. ಆನ್ ಲೈನ್ ನಲ್ಲಿ ದಾಖಲಾತಿಗಳನ್ನು ಪಡೆಯುವ ವ್ಯವಸ್ಥೆ ಬಂದ ನಂತರ ನಾವು ಯಾವುದೇ ಕಾರಣಕ್ಕೂ ತಪ್ಪುಗಳಿಗೆ ಅವಕಾಶ ನೀಡಬಾರದು. ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿ ಬಹಳ ಮಹತ್ವದ್ದು. ರೈತರಿಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಹತ್ತಿರದ ಸಂಬಂಧವಿದ್ದು, ಪ್ರತಿಯೊಬ್ಬ ರೈತರ ಪರಿಚಯ ಅವರಿಗಿರುತ್ತದೆ. ಅವರ ಭೂಮಿಯ ಕುರಿತು ಮಾಹಿತಿ ಗೊತ್ತಿರುತ್ತದೆ. ಅವರ ಪರಿಚಯವಿಟ್ಟುಕೊಂಡು ಅಗತ್ಯ ದಾಖಲಾತಿಗಳನ್ನು ಒದಗಿಸುವುದು ನಿಮ್ಮ ಕೆಲಸ” ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

“ಗ್ರಾಮ ಆಡಳಿತಾಧಿಕಾರಿಗಳು ಉತ್ತಮ ನಡತೆ, ಸಂಪರ್ಕವನ್ನು ಹೊಂದಿದ್ದರೆ ರೈತರು ನಿಮ್ಮ ಮಾತನ್ನು ಕೇಳುತ್ತಾರೆ. ಗ್ರಾಮ ಆಡಳಿತಾಧಿಕಾರಿಗಳು ಒಳ್ಳೆ ರೀತಿಯ ಕೆಲಸ ಮಾಡಿಕೊಟ್ಟರೆ ಅವರ ಮೇಲೂ ಗೌರವ ವಿರುತ್ತದೆ. ಜನರ ಕೆಲಸ ದೇವರ ಕೆಲಸ ಎಂದು ನೆನೆಪಿಟ್ಟುಕೊಳ್ಳಬೇಕು. ನಾವಿರುವುದೇ ಜನರ ಸೇವೆಗಾಗಿ ಎನ್ನುವುದನ್ನು ಮರೆಯಬಾರದು. ಆರು ಲಕ್ಷ ಜನ ಸರ್ಕಾರಿ ನೌಕರರು ಅವರಿಗಾಗಿಯೇ ಇರುವುದು. ರಾಜಕಾರಣಿಗಳು, ಜನರಿಂದ ಆಯ್ಕೆಯಾದರೆ, ಸರ್ಕಾರದಿಂದ ಆಯ್ಕೆಯಾದ ಸರ್ಕಾರಿ ನೌಕರರು ಜನಸೇವೆಯನ್ನು ಅವರ ಧ್ಯೇಯವಾಗಿಸಬೇಕು” ಎಂದು ಹೇಳಿದರು.

“ಕಂದಾಯ ಇಲಾಖೆಯದ್ದು ಅತ್ಯಂತ ಜವಾಬ್ದಾರಿಯುತ ಕೆಲಸ. ಇಲ್ಲಿ ಸುಧಾರಣೆಗಳನ್ನು ತರಬೇಕೆಂದು ಕೃಷ್ಣ ಬೈರೇಗೌಡರಿಗೆ ಸೂಚಿಸಲಾಗಿತ್ತು,ಅವರು ಈಗಾಗಲೇ ಅನೇಕ ಸುಧಾರಣೆಗಳನ್ನು ತಂದಿದ್ದಾರೆ. ಅವರಿಗೆ ಇನ್ನಷ್ಟ ಸುಧಾರಣೆಗಳನ್ನು ತರುವ ಶಕ್ತಿ ಇದೆ” ಎಂದು ತಿಳಿಸಿದರು.

ಅಧಿಕಾರಿಗಳು ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಬೇಕು

“ಗ್ರಾಮ ಆಡಳಿತಾಧಿಕಾರಿಗಳು ತಮ್ಮ ವ್ಯಾಪ್ತಿಯ ಪಂಚಾಯಿತಿಯ ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿರುವುದರಿಂದ ರೈತರಿಗೆ ಎಲ್ಲ ಸಮಯದಲ್ಲಿಯೂ ಲಭ್ಯವಿರಲು ಸಾಧ್ಯವಾಗುತ್ತದೆ. ರೈತರ ಮನೆಮನೆಗೆ ಭೇಟಿ ನೀಡಿ ಅವರ ಕುಂದುಕೊರತೆಗಳನ್ನು ಆಲಿಸಬೇಕು. ಗ್ರಾಮ ಆಡಳಿತಾಧಿಕಾರಿಗಳ ಮಂಜೂ 9834 ಮಂಜೂರಾದ ಹುದ್ದೆಗಳಿಗೆ ಲ್ಯಾಪಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ. ಯಾವುದೇ ಕಾರಣಕ್ಕೆ ರೈತರಿಗೆ ತೊಂದರೆ ಕೊಡುವುದಾಗಲಿ, ಭ್ರಷ್ಟಾಚಾರಕ್ಕಾಗಲಿ ಅವಕಾಶ ಕೊಡಬಾರದು. ಸಣ್ಣ ಹಿಡುವಳಿದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರಿಗೆ ಅನುಕೂಲ ಕಲ್ಪಿಸುವುದು ಗ್ರಾಮ ಆಡಳಿತಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ” ಎಂದರು.

ಭೂಮಿ ಬೀಟ್ ಕಾರ್ಯಕ್ರಮ

“ಕೃಷಿ, ಲಾಭದಾಯಕ ವೃತ್ತಿಯಾಗಿ ಉಳಿದುಕೊಂಡಿಲ್ಲ. ಅನ್ನದಾತರ ಹಾಗೂ ನಾಡಿನ ಒಳಿತಿಗೆ ಕೆಲಸ ಮಾಡುತ್ತಿರುವ ಅರಿವಿರಬೇಕು. ರೈತರಿಗೆ ಭೂಮಿ ಬೀಟ್ ಕಾರ್ಯಕ್ರಮ ಸರ್ಕಾರ ಜಾರಿಗೆ ತಂದಿದೆ. ವಿದ್ಯಾರ್ಥಿದೆಸೆಯಲ್ಲಿ ವ್ಯವಸಾಯ ಕೈಗೊಂಡ ಸಂದರ್ಭದಲ್ಲಿ ಪಕ್ಕದ ರೈತ ಜಮೀನನ್ನು ಅತಿಕ್ರಮಣ ಮಾಡಿದ್ದು, ಈ ಬಗ್ಗೆ ನಡೆದ ಪಂಚಾಯತಿಯ ಬಗ್ಗೆ ತಮ್ಮ ಅನುಭವ ಹಂಚಿಕೊಂಡ ಮುಖ್ಯಮಂತ್ರಿಗಳು, ಜಮೀನುಗಳನ್ನು ಅತಿಕ್ರಮಣದ ಇಂತಹ ಸಮಸ್ಯೆಗಳನ್ನು ನಿವಾರಿಸಲು ಭೂಮಿ ಬೀಟ್ ಕಾರ್ಯಕ್ರಮ ಅನುಕೂಲ ಕಲ್ಪಿಸಿದೆ” ಎಂದು ಹೇಳಿದರು.

ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ, ಶಾಸಕ ಶ್ರೀನಿವಾಸ್, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ , ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X